ಡೈಲಿ ವಾರ್ತೆ:20 ಮೇ 2023

ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ 24ನೇ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು.

ನಗರದ ಕಂಠೀರವ ಕ್ರೀಡಾಂಗಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಮುಖ್ಯಮಂತ್ರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್, ಪ್ರಿಯಾಂಕಾ ಗಾಂಧಿ, ರಣದೀಪ್ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ನಟ ಕಮಲ್ ಹಾಸನ್, ನಟಿ ರಮ್ಯಾ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದಾರೆ.