




ಡೈಲಿ ವಾರ್ತೆ:21 ಮೇ 2023


ಉಳ್ಳಾಲ: ರೈಲು ಡಿಕ್ಕಿ ಹೊಡೆದು ಯುವಕ ಸ್ಥಳದಲ್ಲೇ ಮೃತ್ಯು!
ಉಳ್ಳಾಲ: ತೊಕ್ಕೊಟ್ಟು ಒಳಪೇಟೆ ಬಳಿ ರೈಲ್ವೇ ಹಳಿ ದಾಟುತ್ತಿದ್ದ ಯುವಕನೊಬ್ಬನಿಗೆ ರೈಲು ಢಿಕ್ಕಿ ಹೊಡೆದಿದ್ದು, ಯುವಕ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ನಿನ್ನೆ (ಶನಿವಾರ) ರಾತ್ರಿ ನಡೆದಿದೆ.
ಮೃತರನ್ನು ಬಿಹಾರ ಮೂಲದ 38ವರ್ಷದ ಶ್ರವಣ್ ದಾಸ್ ಎಂದು ಗುರುತಿಸಲಾಗಿದೆ.
ತೊಕ್ಕೊಟ್ಟಿನಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಶ್ರವಣ್ ದಾಸ್, ನಿನ್ನೆ ಕೆಲಸ ಮುಗಿಸಿ ಮನೆಗೆ ಬಂದ ನಂತರ ಹೊಟೇಲ್ ಗೆ ಹೋಗಿದ್ದ. ಅಲ್ಲಿಂದ ವಾಪಸ್ ಬರುವಾಗ ರೈಲ್ವೆ ಹಳಿ ದಾಟುತ್ತಿದ್ದ ಅವರಿಗೆ ರೈಲು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ಯುವಕ ಗಂಭೀರ ಗಾಯಗೊಂಡಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ತಕ್ಷಣ ಸ್ಥಳಕ್ಕೆ ಆಗಮಿಸಿದ ರೈಲ್ವೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬಾಡಿಗೆ ಮನೆಯಲ್ಲಿ ಒಬ್ಬರೇ ಇರುವ ಶ್ರವಣ್ ದಾಸ್ ಅವರ ಪತ್ನಿ ಮಕ್ಕಳು ಬಿಹಾರದಲ್ಲಿದ್ದಾರೆ.