ಡೈಲಿ ವಾರ್ತೆ: 23 ಮೇ 2023
ಮಲ್ಪೆ: ಸಿದ್ದರಾಮಯ್ಯ, ಡಿಕೆಶಿಗೆ ಶುಭಕೋರಿ ಅಳವಡಿಸಿದ ಬ್ಯಾನರ್ ಗೆ ಕಿಡಿಗೇಡಿಗಳಿಂದ ಹಾನಿ
ಮಲ್ಪೆ: ಕರ್ನಾಟಕದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಅವರಿಗೆ ಶುಭಕೋರಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಅಭಿಮಾನಿಗಳು ಮಲ್ಪೆಪಡುಕರೆ ಸೇತುವೆ ಬಳಿ ಅಳವಡಿಸಿದ್ದ ಫ್ಲೆಕ್ಸ್‌ಗೆ ಕಿಡಿಗೇಡಿಗಳು ಹಾನಿ ಎಸಗಿರುವ ಬಗ್ಗೆ ವರದಿಯಾಗಿದೆ.
ಕಿಡಿಗೇಡಿಗಳು ಮೇ 22ರಂದು ರಾತ್ರಿ ವೇಳೆ ಈ ಕೃತ್ಯ ಎಸಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಯಾವುದೇ ದೂರು ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.
ಕಿಡಿಗೇಡಿಗಳು ಫ್ಲೆಕ್ಸ್‌ಗಳನ್ನು ಹರಿದು ಹಾಕಿ ಪರಾರಿಯಾಗಿದ್ದಾರೆಂದು ದೂರಲಾಗಿದೆ. ಪಡುಕರೆಗೆ ಶಾಲೆ, ರಸ್ತೆ, ನಲ್ಲಿ ನೀರು, ವಿದ್ಯುತ್, ಸಮುದ್ರಕ್ಕೆ ತಡೆಗೋಡೆ, ಮಲ್ಪೆ ಬಂದರು, ಸಬ್ಸಿಡಿ, ಸೇತುವೆ, ಪಡಿತರ ಕೇಂದ್ರ ಇಂತಹ ಹಲವಾರು ಅಭಿವೃದ್ಧಿ ಯೋಜನೆಗಳನ್ನು ನೀಡಿರುವುದು ಕಾಂಗ್ರೆಸ್ ಸರಕಾರವೇ ಹೊರತು ಬೇರೆ ಪಕ್ಷಗಳಲ್ಲ. ಫ್ಲೆಕ್ಸ್ ಹರಿಯುವ, ಮತ್ತೊಬ್ಬನನ್ನು ತುಳಿಯುವ, ವ್ಯಕ್ತಿ – ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ನಿರ್ಬಂಧಿಸುವ ಸರ್ವಾಧಿಕಾರದ ಈ ಭಯೋತ್ಪಾದನೆ ಕೃತ್ಯ ನಿಲ್ಲಬೇಕಾಗಿದೆ. ಸಂಬಂಧಪಟ್ಟವರು ಕೂಡಲೇ ಕ್ರಮ ತೆಗೆದುಕೊಳ್ಳಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ.