ಡೈಲಿ ವಾರ್ತೆ:23 ಮೇ 2023
ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳ ಅವಧಿಯಲ್ಲಿ ಬಿರುಗಾಳಿ ಸಹಿತ ಮಳೆ: ಹವಾಮಾನ ಇಲಾಖೆ
ಕರಾವಳಿ: ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳ ಅವಧಿಯಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿನ ಕೆಲವು ಸ್ಥಳಗಳಲ್ಲಿ ಮಿಂಚು ಮತ್ತು ಬಿರುಗಾಳಿ ಸಹಿತ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸಲಿ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಬಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಈ ಬಾರಿ ಮುಂಗಾರು ಆಗಮನ ವಿಳಂಭವಾಗಿದೆ. ಈ ಬಾರಿ ಕೇರಳಕ್ಕೆ ಜೂನ್ ಮೊದಲ ವಾರದಲ್ಲಿ ಮುಂಗಾರು ಆಗಮನವಾಗಲಿದ್ದು, ಕರ್ನಾಟಕಕ್ಕೆ ವರ್ಷಂಪ್ರತಿಯಂತೆ ಈ ಬಾರಿ ತಡವಾಗಿಯೇ ಮುಂಗಾರು ಆಗಮಿಸಲಿದೆ ಎನ್ನಲಾಗುತ್ತಿದೆ.