ಡೈಲಿ ವಾರ್ತೆ:24 ಮೇ 2023
ವಕ್ಪ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿಗೆ ಬಿಗ್ ರಿಲೀಫ್ : ನಾಮ ನಿರ್ದೇಶನವನ್ನು ರದ್ದುಗೊಳಿಸಿದ್ದ ಆದೇಶ ಹಿಂಪಡೆದ ಸರಕಾರ
ಬೆಂಗಳೂರು;ರಾಜ್ಯ ಸರಕಾರವು ವಕ್ಫ್ ಬೋರ್ಡ್ ಅಧ್ಯಕ್ಷ ಮುಹಮ್ಮದ್ ಶಾಫಿ ಸಅದಿ ಸೇರಿದಂತೆ ನಾಲ್ವರು ಸದಸ್ಯರ ನಾಮ ನಿರ್ದೇಶನವನ್ನು ರದ್ದುಗೊಳಿಸಿದ್ದ ಆದೇಶವನ್ನು ಹಿಂಡೆದಿದೆ.
ನಿನ್ನೆ ರಾಜ್ಯ ಸರಕಾರದ ಅಧೀನದಲ್ಲಿ ಇರುವ 140ಕ್ಕೂ ಹೆಚ್ಚು ನಿಗಮ, ಮಂಡಳಿಗಳ ನಾಮ ನಿರ್ದೇಶಿತ ಅಧ್ಯಕ್ಷರು, ಸದಸ್ಯರು ಹಾಗೂ ನಿರ್ದೇಶಕರ ನೇಮಕಾತಿಯನ್ನು ರದ್ದುಗೊಳಿಸಿ ಸರಕಾರ ಆದೇಶ ಹೊರಡಿಸಿತ್ತು.
ಇದೆ ವೇಳೆ ರಾಜ್ಯ ವಕ್ಫ್ ಬೋರ್ಡ್ ನಾಮ ನಿರ್ದೇಶಿತ ಸದಸ್ಯರ ನೇಮಕಾತಿಯನ್ನು ರದ್ದುಗೊಳಿಸಲಾಗಿತ್ತು. ರಾಜ್ಯ ವಕ್ಫ್ ಬೋರ್ಡ್ ಸ್ವಾಯತ್ತ ಸಂಸ್ಥೆಯಾಗಿದ್ದು, ಸದಸ್ಯರ ಅಧಿಕಾರ ಅವಧಿಯು 5 ವರ್ಷಗಳಾಗಿರುತ್ತದೆ.
ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ವಕ್ಫ್ ಬೋರ್ಡ್ ಸದಸ್ಯರ ನಾಮ ನಿರ್ದೇಶನ ರದ್ದುಗೊಳಿಸಿ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ಹಿಂಪಡೆದು ಆದೇಶ ಹೊರಡಿಸಲಾಗಿದೆ.