ಡೈಲಿ ವಾರ್ತೆ:27 ಮೇ 2023

ಜೋಹಾರ್ ಸಿಂಗಾಪುರ್ ಅಂತರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಹಾಗೂ ಕಂಚು ಗೆದ್ದ ಕೋಟ ದಿನೇಶ್ ಗಾಣಿಗ

ಕೋಟ: ಮಲೇಷಿಯಾದಲ್ಲಿ ನಡೆದ ಜೋಹಾರ್ ಸಿಂಗಾಪುರ್ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೇಟಿಕ್ ಕ್ರೀಡಾಕೂಟದಲ್ಲಿ ಕೋಟದ ಹೆಮ್ಮೆಯ ಕ್ರೀಡಾಪಟು ದಿನೇಶ್ ಗಾಣಿಗರವರು ಒಂದು ಬೆಳ್ಳಿ ಹಾಗೂ ಒಂದು ಕಂಚಿನ ಪದಕ ಮುಡಿಗೇರಿಸಿಕೊಂಡಿದ್ದಾರೆ.

ಅಥ್ಲೇಟಿಕ್ ಕ್ರೀಡಾಕೂಟದಲ್ಲಿ ಒಟ್ಟು 20 ದೇಶಗಳ 500ಕ್ಕೂ ಅಧಿಕ ಸ್ಪರ್ಧಿಗಳು ಭಾಗವಹಿಸಿದ್ದು ಅದರಲ್ಲಿ ದಿನೇಶ್ ಗಾಣಿಗರವರು ವೇಗ ನಡಿಗೆಯಲ್ಲಿ ದ್ವಿತೀಯ ಹಾಗೂ 100 ಮೀಟರ್ ಹರ್ಡಲ್ಸ್ ನಲ್ಲಿ ತೃತೀಯ ಸ್ಥಾನವನ್ನು ಪಡೆದು ಭಾರತದ ಕೀರ್ತಿ ಪತಾಕೆಯನ್ನು ಎತ್ತರಕ್ಕೆ ಏರಿಸಿದ್ದಾರೆ.

ಈ ಹಿಂದೆ ಸಿಂಗಾಪುರದಲ್ಲಿ ನಡೆದಿದ್ದ ಸ್ಪರ್ಧೆಯಲ್ಲಿ
ಲ್ಲಿ ಒಂದು ಚಿನ್ನ, ಒಂದು ಬೆಳ್ಳಿ ಹಾಗೂ 2022ರಲ್ಲಿ ಶ್ರೀಲಂಕಾದಲ್ಲಿ ನಡೆದಿದ್ದ ಮಾಸ್ಟರ್ ಅಥ್ಲೆಟಿಕ್‍ನಲ್ಲಿ ಒಂದು ಬೆಳ್ಳಿ ಪದಕವನ್ನು ಪಡೆದಿರುವುದನ್ನು ಇಲ್ಲಿ ಸ್ಮರಿಸಬಹುದಾಗಿದೆ.
ರಾಷ್ಟ್ರೀಯ ಮಾನವ ಹಕ್ಕು ರಾಜ್ಯ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಯುತರು ಸೇವೆ ಸಲ್ಲಿಸುತ್ತಿದ್ದಾರೆ.
ಇವರು ಜೂನ್ 2 ರಂದು ಮಲೇಷಿಯಾದಿಂದ ಭಾರತಕ್ಕೆ ಮರಳಲಿದ್ದಾರೆ.