ಡೈಲಿ ವಾರ್ತೆ: 28 ಮೇ 2023

ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ 6 ಮಂದಿ ಸ್ಥಳದಲ್ಲೇ ಮೃತ್ಯು

ಕೊಪ್ಪಳ: ಲಾರಿ ಮತ್ತು ಕಾರು ನಡುವೆ ಅಪಘಾತ ಉಂಟಾಗಿದ್ದು, ಸ್ಥಳದಲ್ಲಿಯೇ ಆರು ಜನ ಮೃತಪಟ್ಟಿರುವ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ರವಿವಾರ ಸಂಜೆ ವರದಿಯಾಗಿದೆ.

ಮೃತರನ್ನು ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ ಮತ್ತು ರಶ್ಮಿಕಾ ಎಂದು ಗುರುತಿಸಲಾಗಿದೆ.

ವಿಜಯಪುರಿಂದ ಬೆಂಗಳೂರಿಗೆ ಹೊರಟಿದ್ದ ಕಾರಿನ ಟೈರ್ ಸ್ಫೋಟಗೊಂಡ ಪರಿಣಾಮ ಎದುರಿಗೆ ಬರುತ್ತಿದ್ದ ಲಾರಿಗೆ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.

ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಸ್ಥಳೀಯರು ಮೃತದೇಹಗಳನ್ನು ಹೊರತೆಗೆದಿದ್ದಾರೆ.