ಡೈಲಿ ವಾರ್ತೆ: 29 ಮೇ 2023
ಬೈಂದೂರು: ಸ್ನಾತಕೋತ್ತರ ಪದವಿ ಮುಗಿದರೂ ಕೆಲಸ ಸಿಗದ ಕಾರಣ ಖಿನ್ನತೆಗೆ ಒಳಗಾಗಿದ್ದ ಯುವತಿ ಆತ್ಮಹತ್ಯೆಗೆ ಶರಣು
ಕುಂದಾಪುರ: ಸ್ನಾತಕೋತ್ತರ ಪದವಿ ಮುಗಿದರೂ ಕೆಲಸ ಸಿಗದ ಕಾರಣ ಖಿನ್ನತೆಗೆ ಒಳಗಾಗಿದ್ದ ಯುವತಿಯೊಬ್ಬಳು ಮೇ 27ರಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರನ್ನು ಕಗ್ಗೋಡು ಗ್ರಾಮದ ಸೀಗೇಡಿ ನಿವಾಸಿ ಪ್ರಮೋದ ಶೆಟ್ಟಿ ಎಂಬವರ ಪುತ್ರಿ ಗೌತಮಿ (22) ಎಂದು ಗುರುತಿಸಲಾಗಿದೆ.
ಗೌತಮಿ ಉಡುಪಿಯ ಖಾಸಗಿ ಕಾಲೇಜಿನಲ್ಲಿ ಎಂಕಾಂ ಮಾಡಿದ್ದಾರೆ. ಆಕೆ ಬ್ಯಾಂಕ್ ನೇಮಕಾತಿ ಪರೀಕ್ಷೆ ಹಾಗೂ ಇತರೆ ಕಂಪನಿ ನೇಮಕಾತಿಗೆ ಬರೆದಿದ್ದರೂ ಪ್ಲೇಸ್ ಮೆಂಟ್ ಸಿಕ್ಕಿರಲಿಲ್ಲ. ಗೌತಮಿ ತನ್ನ ಕುಟುಂಬ ಸದಸ್ಯರೊಂದಿಗೆ ತನ್ನ ಹತಾಶೆಯನ್ನು ವ್ಯಕ್ತಪಡಿಸಲು ಸಾಧ್ಯವಾಗಲಿಲ್ಲ. ಡೆತ್ ನೋಟ್ ಬರೆದಿಟ್ಟು ಮನೆಯ ಮೊದಲ ಮಹಡಿಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ. ಆಕೆಯನ್ನು ನೇಣಿನ ಕುಣಿಕೆ ತೆಗೆದು ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತಂದರೂ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದರು.
ಈ ಸಂಬಂಧ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.