ಡೈಲಿ ವಾರ್ತೆ: 30 ಮೇ 2023
ಮದುವೆಯಾಗಲು ನಿರಾಕರಿಸಿದ್ದಕ್ಕೆ ಸ್ನೇಹಿತನಿಗೆ ಬಿಸಿ ನೀರು ಎರಚಿ, ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿದ ಯುವತಿ
ಬೆಂಗಳೂರು: ಯುವತಿಯೊಬ್ಬಳು ಮದುವೆಯಾಗಲು ನಿರಾಕರಿಸಿದ್ದಕ್ಕೆ ಸ್ನೇಹಿತನ ಮೇಲೆ ಬಿಸಿ ನೀರು ಎರಚಿದ ಘಟನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದಿದೆ.
ಮೇ 25 ರ ರಾತ್ರಿ ಈ ಘಟನೆ ನಡೆದಿದ್ದು, ಕಲಬುರಗಿ ಮೂಲದ ಭೀಮಾಶಂಕರ ಆರ್ಯ ಎಂಬಾತನಿಗೆ ಗಾಯಗಳಾಗಿವೆ. ಕಲಬುರಗಿ ಜಿಲ್ಲೆಯ ಅಫಜಲಪುರ ಮೂಲದ ಮಹಿಳೆ ಈ ಕೃತ್ಯ ನಡೆಸಿದ್ದಾಳೆ.
ಗಾಯಾಳು ಭೀಮಾಶಂಕರ ಮತ್ತು ಮಹಿಳೆ ನಡುವೆ ಪ್ರೀತಿ ಹುಟ್ಟಿಕೊಂಡಿತ್ತು. ಆದರೆ ಇದಾದ ಕೆಲವೇ ದಿನಗಳಲ್ಲಿ ಮಹಿಳೆಗೆ ಈ ಮೊದಲೇ ಮದುವೆಯಾಗಿದೆ ಎಂಬ ವಿಚಾರ ಯುವನಿಗೆ ತಿಳಿದಿದೆ. ಹೀಗಾಗಿ ಆತ ಮಹಿಳೆಯಿಂದ ಅಂತರ ಕಾಯ್ದುಕೊಳ್ಳಲು ಆರಂಭಿಸಿದ್ದ. ಇಷ್ಟೇ ಅಲ್ಲದೇ ತಾನು ವಾಸವಿದ್ದ ಚಾಮರಾಜಪೇಟೆ ಬಾಡಿಗೆ ರೂಂ ಕೂಡಾ ಆತ ಮಹಿಳೆಗೆ ಬಿಟ್ಟು ಕೊಟ್ಟಿದ್ದ.
ಆದರೆ ಈ ನಡುವೆ ಬೇರೆ ಯುವತಿಯೊಂದಿಗೆ ಭೀಮಾಶಂಕರನಿಗೆ ಮದುವೆ ನಿಶ್ಚಯವಾಗಿತ್ತು. ಮದುವೆಯಾದ ಬಳಿಕ ಭೀಮಾಶಂಕರ ಮತ್ತೆ ಬೆಂಗಳೂರಿಗೆ ಬಂದಿದ್ದ. ಈ ವಿಚಾರ ತಿಳಿದ ಮಹಿಳೆ ಮೇ 25 ರಂದು ಮಾತನಾಡಬೇಕು ಎಂದು ಭೀಮಾಶಂಕರನನ್ನ ರೂಮಿಗೆ ಕರೆದಿದ್ದಾಳೆ.
ಸಂಜೆ ಏಳು ಗಂಟೆ ಸುಮಾರಿಗೆ ರೂಮಿಗೆ ಬಂದಿದ್ದ ಭೀಮಾಶಂಕರ ಈ ವೇಳೆ ಮದುವೆಯಾದ ವಿಚಾರ ಪ್ರಸ್ತಾಪಿಸಿದ್ದ. ಇದರಿಂದ ಕುಪಿತಗೊಂಡ ಮಹಿಳೆ ಏಕಾಏಕಿ ಬಿಸಿ ನೀರು ಕಾಯಿಸಿ ತಂದು ಭೀಮಾಶಂಕರನ ಮುಖಕ್ಕೆ ಎರಚಿದ್ದಾಳೆ. ಅಲ್ಲದೇ ಬಿಯರ್ ಬಾಟಲ್ ನಿಂದ ಮುಖಕ್ಕೆ ಹೊಡೆದು ಮನೆ ಲಾಕ್ ಮಾಡಿಕೊಂಡು ಪರಾರಿಯಾ