ಡೈಲಿ ವಾರ್ತೆ: 31 ಮೇ 2023

ರಾಷ್ಟ್ರೀಯ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ಮೃತ್ಯು

ಬೆಳ್ತಂಗಡಿ: ರಾಷ್ಟ್ರಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ.

ಉಜಿರೆ ಎಸ್.ಡಿ.ಎಂ.ಕಾಲೇಜು ಹಳೇ ವಿದ್ಯಾರ್ಥಿ ಸಾಲಿಯತ್(24) ಪ್ರತಿಭಾನ್ವಿತೆಯಾಗಿದ್ದರು.ಪಡಂಗಡಿ ಪೊಯ್ಯೇಗುಡ್ಡೆ ನಿವಾಸಿಗೆ ಇವರು ವಿವಾಹವಾಗಿ ಒಂದು ವರ್ಷದಿಂದ ಚಿಕ್ಕಮಗಳೂರಿನ ಪತಿ ಮನೆಯಲ್ಲಿದ್ದರು.

ಎದೆನೋವಿನಿಂದ ಮೊದಲು ಅವರಿಗೆ ಬನ್ಕಲ್ ನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು.ಅಲ್ಲಿ ಹೃದಯಾಘಾತ ದೃಢಪಟ್ಟ ಹಿನ್ನೆಲೆ ನಿನ್ನೆ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿತ್ತು.
ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.ಸಾಲಿಯತ್ ನಿಧನದಿಂದ ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿದೆ.

ಸಾಲಿಯತ್ ಅವರು ಉತ್ತರಪ್ರದೇಶದಲ್ಲಿ ನಡೆದ ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಗೆಲ್ಲುವಲ್ಲಿ ಪಾತ್ರ ವಹಿಸಿದ್ದರು.