ಡೈಲಿ ವಾರ್ತೆ: 03 ಜೂನ್ 2023
ಲಂಚ ಪಡೆಯುವಾಗ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದ ಗೃಹರಕ್ಷಕ ದಳದ ಡೆಪ್ಯುಟಿ ಕಮಾಂಡೆಂಟ್ ಅಧಿಕಾರಿಯ ಬಂಧನ!
ಕೋಲಾರ: ಲಂಚ ಪಡೆಯುವ ವೇಳೆ ಗೃಹರಕ್ಷಕ ದಳದ ಡೆಪ್ಯುಟಿ ಕಮಾಂಡೆಂಟ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣ ಕೋಲಾರದಲ್ಲಿ ನಡೆದಿದೆ.
ಅಧಿಕಾರಿ ರಾಜೇಂದ್ರನ್, ಸುಬಾನಾಯಕ್ ಎಂಬವರಿಗೆ ಬೆಂಗಳೂರಿನ ಮೆಟ್ರೋದಲ್ಲಿ ಕೆಲಸಕ್ಕೆ ನಿಯೋಜಿಸಲು ಲಂಚದ ಬೇಡಿಕೆ ಇಟ್ಟಿದ್ದ. ಸುಬಾನಾಯಕ್ 6000 ರೂ. ಲಂಚ ನೀಡುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೆ ಅಧಿಕಾರಿಯನ್ನು ಬಂಧಿಸಿದ್ದಾರೆ.
ಕೋಲಾರ ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಆರೋಪಿ ರಾಜೇಂದ್ರನ್ ವಿರುದ್ಧ ತನಿಖೆ ನಡೆಸುತ್ತಿದ್ದಾರೆ.