ಡೈಲಿ ವಾರ್ತೆ:06 ಜೂನ್ 2023
ಗೃಹ ಜ್ಯೋತಿ ಯೋಜನೆಗೆ 10 ಷರತ್ತುಗಳು ಪ್ರಕಟ: 200 ಯುನಿಟ್ ಉಚಿತ ವಿದ್ಯುತ್ ಪಡೆಯಲು ಷರತ್ತುಗಳು – ಇಲ್ಲಿದೆ ಡಿಟೇಲ್ಸ್
ಬೆಂಗಳೂರು;ರಾಜ್ಯ ಸರಕಾರ 200 ಯುನಿಟ್ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆಯನ್ನು ಜುಲೈ ತಿಂಗಳಿಂದ ಜಾರಿಗೊಳಿಸಲಾಗುವುದಾಗಿ ಈಗಾಗಲೇ ಘೋಷಣೆ ಮಾಡಿದೆ.
ಇದೀಗ ಗೃಹಜ್ಯೋತಿ ಯೋಜನೆಗೆ 10 ಷರತ್ತುಗಳನ್ನು ವಿಧಿಸಿದೆ. ಷರತ್ತುಗಳನ್ನು ಪೂರೈಸಿದವರಿಗೆ ಮಾತ್ರ 200 ಯೂನಿಟ್ ವಿದ್ಯುತ್ ಉಚಿತವಾಗಿ ಲಭ್ಯವಾಗಲಿದೆ.
➤ಈ ಯೋಜನೆಯು ಗೃಹ ಬಳಕೆಯ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ಅನ್ವಯವಾಗುತ್ತದೆ, ವಾಣಿಜ್ಯ ಉದ್ದೇಶಗಳಿಗೆ ವಿದ್ಯುತ್ ಉಪಯೋಗಿಸಿದಲ್ಲಿ ಅನ್ವಯವಾಗುವುದಿಲ್ಲ.
➤ಪ್ರತಿ ತಿಂಗಳ ಮಿಟರ್ ರೀಡಿಂಗ್ ಮಾಡಿದಾಗ, ಒಟ್ಟು ವಿದ್ಯುತ್ ಬಳಕೆಯ ಪ್ರಮಾಣಕ್ಕೆ ಬಿಲ್ಲನ್ನು ನಮೂದಿಸುವುದು.
➤ಗೃಹ ವಿದ್ಯುತ್ ಬಳಕೆದಾರನ ಅರ್ಹ ಮೊತ್ತವನ್ನು ಬಿಲ್‌ನಲ್ಲಿ ಕಡಿತಗೊಳಿಸಿ, ಉಳಿದ ಮೊತ್ತವನ್ನು ಗ್ರಾಹಕರಿಗೆ net bill ನೀಡುವುದು ಹಾಗೂ ಗ್ರಾಹಕರು net bill ನ್ನು ಪಾವತಿಸುವುದು.
➤ಅರ್ಹ ಯೂನಿಟ್ / ಮೊತ್ತಕ್ಕಿಂತ ಒಳಗೆ ಬಿಲ್ ಆಗಿದ್ದಲ್ಲಿ ಅಂತಹ ಗ್ರಾಹಕರಿಗೆ ಶೂನ್ಯ ಬಿಲ್ಲನ್ನು ನೀಡಲಾಗುವುದು.
➤ಈ ಯೋಜನೆಯಡಿ ಸೌಲಭ್ಯ ಪಡೆಯಲು ಇಚ್ಛಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವುದು.
➤ಪ್ರತಿ ಫಲಾನುಭವಿಯು ತನ್ನ Customer ID / Account ID ಅನ್ನು ಆಧಾರ್‌ಗೆ ಕಡ್ಡಾಯವಾಗಿ ಜೋಡಣೆ ಮಾಡುವುದು.
➤ಪ್ರಸ್ತುತ ಚಾಲ್ತಿಯಲ್ಲಿರುವ ಭಾಗ್ಯ ಜ್ಯೋತಿ/ ಕುಟೀರ ಜ್ಯೋತಿ ಯೋಜನೆ ಮತ್ತು ಅಮೃತ ಜ್ಯೋತಿ ಯೋಜನೆಯ ಫಲಾನುಭವಿ ಗ್ರಾಹಕರುಗಳನ್ನು ಗೃಹ ಜ್ಯೋತಿ ಯೋಜನೆಯಡಿಯಲ್ಲಿ ಸೇರ್ಪಡಿಸುವುದು.
➤ದಿನಾಂಕ 30.06.2023ರ ಅಂತ್ಯಕ್ಕೆ (ಜೂನ್ 2023ರ ಮಾಹೆಯಲ್ಲಿ ಬಳಸಿದ ವಿದ್ಯುತ್ ಪ್ರಮಾಣಕ್ಕೆ ಜುಲೈ 2023ರಲ್ಲಿ ವಿತರಿಸಿದ ಬಿಲ್ಲಿನ ಮೊತ್ತ ಒಳಗೊಂಡಂತೆ) ಬಾಕಿ ಇರುವ ವಿದ್ಯುತ್ ಶುಲ್ಕದ ಬಾಕಿ ಮೊತ್ತವನ್ನು 3 ತಿಂಗಳೊಳಗೆ ಪಾವತಿಸತಕ್ಕದ್ದು, ಬಾಕಿ ಮೊತ್ತವನ್ನು ನಿಗದಿತ ಅವಧಿಯೊಳಗೆ ಪಾವತಿಸದಿದ್ದಲ್ಲಿ ಅಂತಹ ಗ್ರಾಹಕರ ವಿದ್ಯುತ್ ಸ್ಥಾವರಗಳ ಸಂಪರ್ಕವನ್ನು ಕಡಿತಗೊಳಿಸಲಾಗುವುದು.
ಗೃಹ ವಿದ್ಯುತ್ ಗ್ರಾಹಕರ ಸ್ಥಾವರಗಳಿಗೆ ಮಾಪಕವನ್ನು ಅಳವಡಿಸುವುದು ಹಾಗೂ ಮಾಪಕ ಓದುವುದು ಕಡ್ಡಾಯವಾಗಿರುತ್ತದೆ.
➤ಗೃಹ ವಿದ್ಯುತ್ ಬಳಕೆದಾರರ ಹೆಸರಿನಲ್ಲಿ ಒಂದಕ್ಕಿಂತ ಹೆಚ್ಚು ಸ್ಥಾವರಗಳಿದ್ದಲ್ಲಿ, ಒಂದು ಸ್ಥಾವರಕ್ಕೆ ಮಾತ್ರ ಈ ಯೋಜನೆಯಡಿಯ ಸೌಲಭ್ಯಕ್ಕೆ ಅರ್ಹರಾಗುವರು.
ಇನ್ನು 200 ಯೂನಿಟ್‌ಗಳ ಬಳಕೆಯನ್ನು ಮೀರಿದ ಗ್ರಾಹಕರು ಪೂರ್ಣ ವಿದ್ಯುತ್ ಬಿಲ್ಲನ್ನು ಪಾವತಿಸಲು ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದೆ.