ಡೈಲಿ ವಾರ್ತೆ: 09 ಜೂನ್ 2023

ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ ಶವ ಇಟ್ಟಿದ್ದಕ್ಕೆ ಶಾಲೆಗೆ ಬರಲು ಮಕ್ಕಳು ಹಿಂದೇಟು – ಶಾಲೆ ನೆಲಸಮ

ಭುವನೇಶ್ವರ: ಒಡಿಶಾ ರೈಲು ಅಪಘಾತದಲ್ಲಿ ಮೃತಪಟ್ಟವರ ದೇಹಗಳನ್ನು ಇರಿಸಲಾಗಿದ್ದ ಬಹನಾಗ್‍ನ ಸರ್ಕಾರಿ ಶಾಲೆಯ ಕಟ್ಟಡವನ್ನು ಶುಕ್ರವಾರ ಕೆಡವಲಾಗಿದೆ.

ಅನೇಕ ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಲೆಯ ಆವರಣಕ್ಕೆ ಬರಲು ಹಿಂದೇಟು ಹಾಕಿದ್ದರು.

ಇದರಿಂದಾಗಿ ಶಾಲಾ ಆಡಳಿತ ಸಮಿತಿ ಹಳೆಯ ಶಾಲಾ ಕಟ್ಟಡವನ್ನು ನೆಲಸಮಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿತ್ತು. ಶವಗಳನ್ನು ಇರಿಸಿದ್ದರಿಂದ ಹಾಗೂ ಘಟನೆಯಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಆಘಾತಕ್ಕೊಳಗಾಗಿದ್ದರು. ಅಲ್ಲದೇ ಶಾಲಾ ಕಟ್ಟಡ ಹಳೆಯದಾಗಿದೆ ಎಂದು ಸಮಿತಿ ಹೇಳಿಕೊಂಡಿದೆ.

ರೈಲು ಅಪಘಾತದ ನಂತರ ಶಾಲೆಯ ಕೆಲವು ಹಿರಿಯ ವಿದ್ಯಾರ್ಥಿಗಳು ಮತ್ತು ಎನ್‍ಸಿಸಿ ಕೆಡೆಟ್‍ಗಳು ರಕ್ಷಣಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಆದರೆ ಕಿರಿಯ ವಿದ್ಯಾರ್ಥಿಗಳು ಇದರಿಂದ ಆಘಾತಕ್ಕೊಳಗಾಗಿದ್ದಾರೆ. ಇದನ್ನೂ ಹೋಗಲಾಡಿಸಲು ಶಾಲಾ ಆವರಣದಲ್ಲಿ ಧಾರ್ಮಿಕ ಕಾರ್ಯಕ್ರಮವನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಶಾಲಾ ಮುಖ್ಯ ಶಿಕ್ಷಕಿ ಪ್ರಮಿಳಾ ಸ್ವೈನ್ ತಿಳಿಸಿದ್ದಾರೆ.