ಡೈಲಿ ವಾರ್ತೆ: 13 ಜೂನ್ 2023

ಪಠ್ಯಪುಸ್ತಕ ಪರಿಷ್ಕರಣೆಗೆ ಸಮಿತಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಚಂದ್ರಶೇಖರ್ ಕಂಬಾರ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಮುಂದಿನ ವರ್ಷ ಪಠ್ಯಪುಸ್ತಕ ಪರಿಷ್ಕರಣೆಗೆ ಸಮಿತಿ ರಚಿಸಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು.