ಡೈಲಿ ವಾರ್ತೆ: 14 ಜೂನ್ 2023

ಪಂಪೈಲ್: ಸ್ಕೂಟರ್ ಗೆ ಟಿಪ್ಪರ್ ಡಿಕ್ಕಿ,-  ಸ್ಕೂಟರ್ ಸವಾರ ಮೃತ್ಯು

ಮಂಗಳೂರು : ಟಿಪ್ಪರ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟಿರುವ ಘಟನೆ ಮಂಗಳೂರಿನ ಪಂಪ್‌ವೆಲ್‌ನಲ್ಲಿ ನಡೆದಿದೆ.

ಇಚ್ಚಂಪಾಡಿ ಇಲ್ಲುಂಗಲ್ ನಿವಾಸಿ ಆಂಟೋನಿ ಹಾಗೂ ವಾಮನ ದಂಪತಿ ಪುತ್ರ ಸಂದೇಶ್ (25)ಮೃತ ಯುವಕ ಎಂದು ತಿಳಿದು ಬಂದಿದೆ.

ಇವರು ಬೆಂದೂರ್‌ವೆಲ್ ನಲ್ಲಿ ಸಾಫ್ಟ್ವೇರ್ ಕಾಂಪನಿಯಲ್ಲಿ ಉದ್ಯೋಗಿಯಾಗಿದ್ದರು ಎಂದು ತಿಳಿದು ಬಂದಿದೆ.

ಕೆಲಸ ಮುಗಿಸಿ ವಾಪಸ್ ರೂಮಿಗೆ ತೆರಳುವ ವೇಳೆ ಪಂಪ್’ವೆಲ್‌ನಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕನನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಯುವಕ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.