ಡೈಲಿ ವಾರ್ತೆ: 14 ಜೂನ್ 2023

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

ಬಂಟ್ವಾಳ : ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕರ್ನಾಟಕ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾಹಿತಿ ಕಾರ್ಯಕ್ರಮವು ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆಯಿತು.

ದ.ಕ.ಜಿಲ್ಲಾ ಕಾಂಗ್ರೆಸ್ ನಿರ್ದೇಶನದಂತೆ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಸಚಿವ ರಮಾನಾಥ ರೈ ಮಾತನಾಡಿ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ನೀಡಿರುವ ಗ್ಯಾರಂಟಿ ಯೋಜನೆಗಳನ್ನು ಓಟಿನ ಶಾಯಿಯ ಗುರುತು ಮಾಸುವ ಮುನ್ನವೇ ಜಾರಿಗೆ ತರುವ ಮೂಲಕ ಕಾಂಗ್ರೆಸ್ ಪಕ್ಷವು ಈ ಹಿಂದಿನಿಂದಲೂ ನಡೆದುಕೊಂಡು ಬಂದಂತೆ ಕೊಟ್ಟ ಮಾತಿಗೆ ಕಾಂಗ್ರೆಸ್ ಪಕ್ಷ ಯಾವತ್ತೂ ಬದ್ದವಾಗಿದೆ ಎಂಬುದನ್ನು ಸಾಬೀತುಪಡಿಸಿದೆ ಎಂದರು.

ಈಗಾಗಲೇ ಜಾರಿಯಾಗಿರುವ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಉಚಿತವಾಗಿ ತಲುಪಿಸುವ ನಿಟ್ಟಿನಲ್ಲಿ ಪ್ರತೀ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇಂದಿರಾ ಸೇವಾ ಕೇಂದ್ರವನ್ನು ತೆರೆದು ಕಾರ್ಯ ಪ್ರವರ್ಥರಾಗಬೇಕಾಗಿದೆ ಎಂದವರು ತಿಳಿಸಿದರು.

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಅಧ್ಯಕ್ಷತೆ ವಹಿಸಿದ್ದರು.

ಗ್ಯಾರಂಟಿ ಯೋಜನೆಗಳ ದ.ಕ.ಜಿಲ್ಲಾ ಸಂಯೋಜಕರುಗಳಾದ ಸುಭಾಶ್ಚಂದ್ರ ಶೆಟ್ಟಿ ಕೊಲ್ನಾಡು ಹಾಗೂ ಲಾರೆನ್ಸ್ ಡಿ’ ಸೋಜ ಯೋಜನೆಗಳು ಮತ್ತು ಅದರ ಪ್ರಯೋಜನ ಪಡೆಯುವ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು

ಕಾರ್ಯಕ್ರಮದಲ್ಲಿ ಪಾಣೆಮಂಗಳೂರು ಬ್ಲಾಕ್ ಸಂಯೋಜಕರುಗಳಾದ ಇಬ್ರಾಹಿಂ ನವಾಝ್ ಬಡಕಬೈಲು, ರೋಶನ್ ರೈ, ಬಂಟ್ವಾಳ ಬ್ಲಾಕ್ ಸಂಯೋಜಕರುಗಳಾದ ನೆಲ್ವಿಸ್ಟರ್ ಪಿಂಟೋ, ಪುರುಷೋತ್ತಮ
ಅಲ್ಲಿಪಾದೆ, ಅಜಿತ್,
ಪಕ್ಷ ಪ್ರಮುಖರಾದ ಪದ್ಮಶೇಖರ ಜೈನ್, ಬಿ.ಎಂ.ಅಬ್ಬಾಸ್ ಅಲಿ, ಜಗದೀಶ್ ಕೊಯಿಲ, ಕೆ.ಪದ್ಮನಾಭ ರೈ, ಜಯಂತಿ ಪೂಜಾರಿ, ಮಲ್ಲಿಕಾ ಪಕ್ಕಳ ಮೊದಲಾದವರು ಭಾಗವಹಿಸಿದ್ದರು.