ಡೈಲಿ ವಾರ್ತೆ:15 ಜೂನ್ 2023
ನಿಷೇಧಿತ ಪಿಎಫ್ಐ ನ ಮತ್ತೋರ್ವ
ನಾಯಕನನ್ನು ಬಂಧಿಸಿದ NIA
ಬಳ್ಳಾರಿ:ಕರ್ನಾಟಕದ ಬಳ್ಳಾರಿಯಲ್ಲಿ ನಕಲಿ ಗುರುತಿನಡಿಯಲ್ಲಿ ವಾಸಿಸುತ್ತಿದ್ದ 33 ವರ್ಷದ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ನಾಯಕನಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಮಂಗಳವಾರ ಬಂಧಿಸಿರುವ ಬಗ್ಗೆ ವರದಿಯಾಗಿದೆ.
ಬಂಧಿತ ಆರೋಪಿ ನಿಜಾಮಾಬಾದ್ ನಲ್ಲಿ ಸಂಚು ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎನ್ನಲಾಗಿದ್ದು ಕಳೆದ ವರ್ಷ ಸೆಪ್ಟೆಂಬರ್ ನಿಂದ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಬಂಧನ ನಿಷೇಧಿತ ಸಂಘಟನೆಯಾದ PFI ಯ ನಾಯಕರು ಮತ್ತು ಕಾರ್ಯಕರ್ತರು ಶಸ್ತ್ರಾಸ್ತ್ರ ತರಬೇತಿಯನ್ನು ನೀಡಲು ನಡೆಸಿದ ಕ್ರಿಮಿನಲ್ ಪಿತೂರಿಗೆ ಸಂಬಂಧಿಸಿದೆ ಎನ್ನಲಾಗಿದೆ.
33 ವರ್ಷದ ಆರೋಪಿ ನಂದ್ಯಾಲದ ನೊಸಾಮ್ ಮೊಹಮ್ಮದ್ ಯೂನಸ್ ಅಲಿಯಾಸ್ ಯೂನಸ್ ಬಂಧಿತ. ಈತ ತನ್ನ ಅಣ್ಣನ ಇನ್ವರ್ಟರ್ ವ್ಯವಹಾರದಲ್ಲಿ ಕೆಲಸ ಮಾಡುತ್ತಿದ್ದ.
2022 ರ ಸೆಪ್ಟೆಂಬರ್‌ನಲ್ಲಿ ಎನ್‌ಐಎ ಅಧಿಕಾರಿಗಳು ಅವರ ಮನೆಯನ್ನು ಶೋಧಿಸಿದಾಗ, ಅವನು ತನ್ನ ಹೆಂಡತಿಯೊಂದಿಗೆ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದನು. ಬಳಿಕ ಬಳ್ಳಾರಿಯಲ್ಲಿ ಎಡ್ರಸ್ ಬದಲಿಸಿ ವಾಸಿಸುತ್ತಿದ್ದ ಎನ್ನಲಾಗಿದೆ. ಆರೋಪಿ ಯೂನಸ್ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಪಿಎಫ್ ಐ ಸಂಘಟನೆಯ ಸದಸ್ಯರಿಗೆ ಶಸ್ತ್ರಾಸ್ತ್ರ ತರಬೇತಿ ನೀಡುತ್ತಿದ್ದ. ಪಿಎಫ್ ಐ ಬ್ಯಾನ್ ಆದ ಬಳಿಕ ತಲೆಮರೆಸಿಕೊಂಡು ಕುಟುಂಬ ಸಮೇತ ಬಳ್ಳಾರಿಯ ಕೌಲ್ ಬಜಾರ್ ನಲ್ಲಿ ಗುರುತು ಬದಲಿಸಿಕೊಂಡು ಪ್ಲಂಬರ್ ಕೆಲಸ ಮಾಡಿಕೊಂಡಿದ್ದ ಪಿಎಫ್ ಐ ಸಂಘಟನೆಯ ಯುವಕರಿಗೆ ಶಸ್ತ್ರಾಸ್ತ್ರ ತರಬೇತಿ ನೀಡುತ್ತಿದ್ದ ಯೂನೂಸ್ ಆಂಧ್ರಪ್ರದೇಶ ಮತ್ತು ತೆಲಂಗಾಣದ ರಾಜ್ಯಗಳ ರಾಜ್ಯ ಸಂಯೋಜಕನಾಗಿದ್ದ. ಇದೀಗ ಈತನಿಗೆ ಎನ್ ಐಎ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ವರದಿಯಾಗಿದೆ.