ಡೈಲಿ ವಾರ್ತೆ:15 ಜೂನ್ 2023
ಬೈಂದೂರು: ಕೊರಗರ ಧರಣಿಗೆ ಮಣಿದ ಜಿಲ್ಲಾಡಳಿತ
ಕುಂದಾಪುರ:ಉಡುಪಿ ಜಿಲ್ಲಾ ಕೊರಗ ಸಂಘಟನೆಗಳು ಹಾಗೂ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ, ಉಡುಪಿ ಜಿಲ್ಲಾ ಸಂಘಟನಾ ಸಮಿತಿಯ ನೇತೃತ್ವದಲ್ಲಿ ವಾಸಿಸುವ ಭೂಮಿಯ ಹಕ್ಕಿಗಾಗಿ,ಮಹಮ್ಮದ್ ಫೀರ್ ವರದಿ ಜ್ಯಾರಿಗೆ ಆಗ್ರಹಿಸಿ ನಾಡಾ ಗ್ರಾಮ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಜೂ. 14 ರಂದು ಬುಧವಾರ ನಡೆದ ಧರಣಿ ಸತ್ಯಾಗ್ರಹಕ್ಕೆ ಕೊನೆಗೂ ಜಿಲ್ಲಾಡಳಿತ ಮಣಿದು ಲಿಖಿತ ಭರವಸೆ ನೀಡಿದೆ.
ಜಿಲ್ಲಾಧಿಕಾರಿಗಳ ಪರವಾಗಿ ಪ್ರಭಾರ ಉಪವಿಭಾಗಾಧಿಕಾರಿ ಶೋಭಾಲಕ್ಷ್ಮಿ ಸ್ಥಳಕ್ಕೆ ಭೇಟಿ ಪ್ರತಿಭಟನಾಕಾರರೊಂದಿಗೆ ಮಾತುಕತು ನಡೆಸಿ ಜುಲೈ 5ರಂದು ಬೆಳಿಗ್ಗೆ 11 ಘಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಭೂಮಿ ಹಕ್ಕುಗಳಿಗೆ ಸಂಬಂಧಿಸಿದಂತೆ ವಿಶೇಷ ಸಭೆ ನಡೆಸಿ ಬೇಡಿಕೆ ಈಡೇರಿಸುವ ಬಗ್ಗೆ ಲಿಖಿತ ರೂಪದಲ್ಲಿ ಭರವಸೆ ನೀಡಲಾಯಿತು.