ಡೈಲಿ ವಾರ್ತೆ:18 ಜೂನ್ 2023

ಇಂದಿನಿಂದಲೇ ಉಚಿತ ವಿದ್ಯುತ್ ಪಡೆಯಲು “ಗೃಹ ಜ್ಯೋತಿ” ಯೋಜನೆಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಕೆ ಪ್ರಾರಂಭ; ಮೊಬೈಲ್ ಗಳಲ್ಲೂ ಅರ್ಜಿ ಸಲ್ಲಿಕೆಗೆ ಅವಕಾಶ, ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಮಾಹಿತಿ

ಬೆಂಗಳೂರು;ಕಾಂಗ್ರೆಸ್ ನ ಗ್ಯಾರೆಂಟಿಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆಯಡಿ 200 ಯುನಿಟ್ ಉಚಿತ ವಿದ್ಯುತ್ ಪಡೆಯಲು ಇಂದಿನಿಂದಲೇ ಅರ್ಜಿ ಸಲ್ಲಿಕೆ ಆಂರಭಗೊಳ್ಳಲಿದೆ.

ಗ್ರಾಹಕರು ಅರ್ಜಿ ಸಲ್ಲಿಕೆಗೆ ಸೈಬರ್ ಗಳಿಗೆ ಎಂದೇ ಹೋಗ ಬೇಕೆಂದಿಲ್ಲ, ಮೊಬೈಲ್, ಕಂಪ್ಯೂಟರ್, ಲ್ಯಾಪ್ ಟಾಪ್ ಗಳಲ್ಲಿಯೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಗ್ರಾಹಕರು ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಕೂಡ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಇದಲ್ಲದೇ ಗ್ರಾಮ ಪಂಚಾಯಿತಿ, ನಾಡಕಚೇರಿ ಅಥವಾ ಎಲ್ಲಾ ವಿದ್ಯುತ್ ಕಚೇರಿಗಳಲ್ಲಿ ಕೂಡ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಅರ್ಜಿ ಸಲ್ಲಿಕೆಗೆ ಆಧಾರ್ ಕಾರ್ಡ್, ವಿದ್ಯುತ್ ಬಿಲ್ ಬೇಕು.
ನೋಂದಣಿ ಮಾಡುವಾಗ ಆಧಾರ್ ಸಂಖ್ಯೆ, ವಿದ್ಯುತ್ ಬಿಲ್‌‌ನ ಖಾತೆ ಸಂಖ್ಯೆ ನೋಂದಾವಣಿ ಮಾಡಬೇಕಿದೆ.

200 ಯೂನಿಟ್ ಗಳವರೆಗೆ ಉಚಿತ ವಿದ್ಯುತ್ ಯೋಜನೆ ಸಂಬಂಧ ಹೆಚ್ಚಿನ ಮಾಹಿತಿಗಾಗಿ ಸಮೀಪದ ವಿದ್ಯುತ್ ಕಚೇರಿಯನ್ನು ಸಂಪರ್ಕಿಸಬಹುದು. ಅಥವಾ ಸಹಾಯವಾಣಿ ಸಂಖ್ಯೆ 1912ಗೆ ಕರೆ ಮಾಡಿ ಪಡೆಯಬಹುದು.
ಇದಲ್ಲದೆ ಮೊಬೈಲ್ ನಲ್ಲಿ ಸುಲಭವಾಗಿ ಅರ್ಜಿ ಸಲ್ಲಿಸಲು ಇಂಧನ ಇಲಾಖೆಯಿಂದ ಬಿಡುಗಡೆ ಮಾಡಿರುವಂತ ಕ್ಯೂ ಆರ್ ಕೋಡ್ ಸ್ಕ್ಯಾನ್ ಮಾಡಿ ಕೂಡ ಅರ್ಜಿ ಸಲ್ಲಿಸಬಹುದಾಗಿದೆ.

ಅಥವಾ http://sevasindhugs.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.