ಡೈಲಿ ವಾರ್ತೆ:18 ಜೂನ್ 2023

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಸ್ ಅಪಘಾತ: 10 ಮಂದಿಗೆ ಗಾಯ

ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಸ್ ಅಪಘಾತವಾಗಿ 10 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಅಪಘಾತದಲ್ಲಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ವಿಮಾಣ ನಿಲ್ದಾಣದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾನುವಾರ ಬೆಳಿಗ್ಗೆ ಟರ್ಮಿನಲ್ 2 ರಿಂದ ಟರ್ಮಿನಲ್ –1ಕ್ಕೆ ತೆರಳುವ ಶೆಟಲ್ ಬಸ್ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಬಸ್‌ನಲ್ಲಿ ಒಟ್ಟು 17 ಪ್ರಯಾಣಿಕರು (15 ಪ್ಯಾಕ್ಸ್ ಮತ್ತು 2 ಸಿಬ್ಬಂದಿ) ಇದ್ದರು ಎಂದು ಬಿಐಎಎಲ್ ವಕ್ತಾರರು ತಿಳಿಸಿದ್ದಾರೆ.