ಡೈಲಿ ವಾರ್ತೆ: 18 ಜೂನ್ 2023

ಶ್ರೀನಿವಾಸ ಸಾಗರ ಜಲಾಶಯದಲ್ಲಿ ಈಜಲು ತೆರಳಿದ್ದ ಯುವಕ ನೀರಲ್ಲಿ ಮುಳುಗಿ ಮೃತ್ಯು

ಚಿಕ್ಕಬಳ್ಳಾಪುರ: ಶ್ರೀನಿವಾಸ ಸಾಗರ ಜಲಾಶಯದಲ್ಲಿ ಮುಳುಗಿ ಯುವಕನೊರ್ವ ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

ಬೆಂಗಳೂರಿನ ಶ್ಯಾಂಪುರದ ನಿವಾಸಿ ಮಹಮದ್ ಯಾಸಿನ್ (26) ಮೃತ ದುರ್ದೈವಿ.
10 ಮಂದಿ ಸ್ನೇಹಿತರೊಂದಿಗೆ ಎರಡು ಕಾರುಗಳಲ್ಲಿ ಜಲಾಶಯಕ್ಕೆ ಪ್ರವಾಸಕ್ಕೆ ಬಂದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
4-5 ಮಂದಿ ಈಜಲು ತೆರಳಿದ್ದರು, ಆದರೆ ಯಾಸಿನ್ ಮುಳುಗಿದ್ದಾನೆ. ಕೂಡಲೇ ಸ್ಥಳೀಯರು ಆತನನ್ನು ಮೆಲಕ್ಕೆತ್ತಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಯುವಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.