ಡೈಲಿ ವಾರ್ತೆ:20 ಜೂನ್ 2023
ದಕ್ಷಿಣಕನ್ನಡ: ಯುವಕರ ಮೇಲಿನ ಪೊಲೀಸ್ ದೌರ್ಜನ್ಯ ಪ್ರಕರಣ – ಡಿವೈಎಸ್ಪಿ ಡಾ. ವೀರಯ್ಯ ಹಿರೇಮಠರವರಿಗೆ ಜಾಮೀನು
ಪುತ್ತೂರು;ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಭಾವಚಿತ್ರವನ್ನೊಳಗೊಂಡ ಬ್ಯಾನರ್ಗೆ ಶ್ರದ್ಧಾಂಜಲಿ ಬರಹದೊಂದಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತ ಬಂಧಿತ ಆರೋಪಿಗಳಿಗೆ ಪೊಲೀಸ್ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ.
ಬ್ಯಾನರ್ ಅಳವಡಿಕೆ ಪ್ರಕರಣದಲ್ಲಿ ಬಂಧಿತ ಯುವಕರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿರುವ ಆರೋಪವನ್ನು ಡಿವೈಎಸ್ಪಿ ಡಾ.ವೀರಯ್ಯ ಹಿರೇಮಠ ಎದುರಿಸುತ್ತಿದ್ದವರು.ಅವರು ಈ ಬಗ್ಗೆ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆದುಕೊಂಡಿದ್ದಾರೆ.