ಡೈಲಿ ವಾರ್ತೆ:22 ಜೂನ್ 2023

ಬೆಳ್ಳಾರೆ ಹಿದಾಯ ಪಬ್ಲಿಕ್ ಸ್ಕೂಲ್, ವಿದ್ಯಾ ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಬೆಳ್ಳಾರೆ: ಬೆಳ್ಳಾರೆಯ ಹಿದಾಯ ಪಬ್ಲಿಕ್ ಸ್ಕೂಲ್, ವಿದ್ಯಾಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ. 21 ರಂದು ಆಚರಿಸಲಾಯಿತು.

ಯೋಗ ತರಬೇತುದಾರರಾದ ಶಿಕ್ಷಕಿ ಕುಮಾರಿ ಹೇಮಲತಾ ಪಿ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭಾಧ್ಯಕ್ಷತೆಯನ್ನು ಮುಖ್ಯ ಶಿಕ್ಷಕಿ ಶ್ರೀಮತಿ ಸುನೈನಾ ಬಿ ಯವರು ವಹಿಸಿ ಯೋಗದ ಮಹತ್ವದ ಬಗ್ಗೆ ತಿಳಿಸಿದರು.
ಉಳಿದಂತೆ ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು.