ಡೈಲಿ ವಾರ್ತೆ:23 ಜೂನ್ 2023

ಕೋಟ ಪೊಲೀಸ್ ಠಾಣೆ ವತಿಯಿಂದ ಮಾದಕ ದ್ರವ್ಯ ವಿರೋಧಿ ಮತ್ತು ಜಾಗೃತಿ ಕಾರ್ಯಕ್ರಮ

ಕೋಟ: ಉಡುಪಿ ಜಿಲ್ಲಾ ಪೊಲೀಸ್‌ ಹಾಗೂ ಕೋಟ ಪೊಲೀಸ್‌ ಠಾಣೆಯ ಸಹಯೋಗದಲ್ಲಿ ಮಾದಕ ದ್ರವ್ಯ ವಿರೋಧಿ ಮತ್ತು ಜಾಗೃತಿ ಅರಿವು ಕಾರ್ಯಕ್ರಮವು ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಶಾಲೆ, ಕಾಲೇಜ್, ಹಾಗೂ ದೇವಸ್ಥಾನ, ಸಾರ್ವಜನಿಕ ಸ್ಥಳಗಳಲ್ಲಿ ಜೂ. 22 ಹಾಗೂ 23 ರಂದು ನಡೆಯಿತು.

ಕೋಟ ಠಾಣಾಧಿಕಾರಿ ಶಂಭುಲಿಂಗಯ್ಯ ಮಾತನಾಡಿ ವಿದ್ಯಾರ್ಥಿಗಳಲ್ಲಿ ಮಾದಕ ದ್ರವ್ಯಗಳಿಂದಾಗುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ರಾಜ್ಯದಾದ್ಯಂತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.



ವಿದ್ಯಾರ್ಥಿಗಳಲ್ಲಿ ಅತಿಯಾದ ಸಿಟ್ಟು, ಸ್ವಭಾವದಲ್ಲಿ ವ್ಯತ್ಯಾಸ ಕಂಡು ಬಂದರೆ ಪೋಷಕರು ಜಾಗೃತರಾಗಬೇಕು. ಮಕ್ಕಳ ಬಗ್ಗೆ ಕಾಳಜಿ ವಹಿಸಿದಲ್ಲಿ ಇಂತಹ ದುಶ್ಚಟಗಳಿಗೆ ಬಲಿಯಾಗುವುದನ್ನು ತಪ್ಪಿಸಬಹುದು. ಅಲ್ಲದೆ ನಮ್ಮ ಪರಿಸರದಲ್ಲಿ ಯಾರಾದರೂ ಮಾದಕ ದ್ರವ್ಯ ದುಶ್ಚಟಕ್ಕೆ ಬಲಿಯಗಿದ್ದರೆ ಅಂತವರನ್ನು ಗುರುತಿಸಿ ಪೊಲೀಸ್ ಅಥವಾ ಆಶಾ ಕಾರ್ಯಕರ್ತರ ಗಮನಕ್ಕೆ ತನ್ನಿ. ಅಂತವರನ್ನು ನಾವು ಸರಿದಾರಿಗೆ ತರುತ್ತೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಅಧ್ಯಾಪಕರು ಉಪಸ್ಥಿತರಿದ್ದರು. ಪೊಲೀಸ್ ಸಿಬಂದಿಗಳಾದ ಸೂರಿ,ಹಾಗೂ ರೇವತಿ ಸಹಕರಿಸಿದರು.