ಡೈಲಿ ವಾರ್ತೆ:27 ಜೂನ್ 2023

ನಾಪತ್ತೆಯಾಗಿದ್ದ ವಿದ್ಯಾರ್ಥಿ ಬೆಂಗಳೂರಿನಲ್ಲಿ ಪತ್ತೆ!

ಮಂಜೇಶ್ವರ: ನಾಪತ್ತೆಯಾಗಿದ್ದ ವಿದ್ಯಾರ್ಥಿ ಬೆಂಗಳೂರಿನಲ್ಲಿ ಪತ್ತೆಯಾದ ಘಟನೆ ನಡೆದಿದೆ.

ನಾಪತ್ತೆಯಾಗಿದ್ದ ವಿದ್ಯಾರ್ಥಿ ಮಂಜೇಶ್ವರ ಠಾಣಾ ವ್ಯಾಪ್ತಿಯ ಅನಂತಗಿರಿ ನಿವಾಸಿ, ಅಡ್ಯನಡ್ಕ ಜೂನಿಯರ್ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿ ಅಂಕಿತ್ ನಾಯಕ್ (17) ಎಂದು ತಿಳಿದು ಬಂದಿದೆ.

ಭಾನುವಾರ ಸಂಜೆ ಆಕ್ಟಿವಾದಲ್ಲಿ ತೆರಳಿದ್ದ ವಿದ್ಯಾರ್ಥಿ ನಾಪತ್ತೆಯಾಗಿದ್ದು, ಈ ಕುರಿತು ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ವಿದ್ಯಾರ್ಥಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ ಎನ್ನಲಾಗಿದೆ.