



ಡೈಲಿ ವಾರ್ತೆ: 4 ಜುಲೈ 2023


ನಡುರಸ್ತೆಯಲ್ಲಿ ಅಟ್ಟಾಡಿಸಿ ಯುವಕನ ಬರ್ಬರ ಕೊಲೆ; ಬೆಚ್ಚಿಬಿದ್ದ ಜನ
ಹಾಸನ: ಹಾಡಹಗಲೇ ನುಡುರಸ್ತೆಯಲ್ಲಿ ಅಟ್ಟಾಡಿಸಿ ರೌಡಿಶೀಟರ್ ಗೆ ಬರ್ಬರವಾಗಿ ಹತ್ಯೆ ಮಾಡಲಾಗಿದೆ.
ಮಾಸ್ತಿಗೌಡ (30) ಕೊಲೆಯಾದ ರೌಡಿಶೀಟರ್ ಆಗಿದ್ದು,
ಹಾಸನ ಜಿಲ್ಲೆ, ಚನ್ನರಾಯಪಟ್ಟಣದ ಧನಲಕ್ಷ್ಮೀ ಚಿತ್ರಮಂದಿರದ ಮುಂಭಾಗ ಘಟನೆ ನಡೆದಿದೆ.
ಇನ್ನೋವಾ ಕಾರಿನಲ್ಲಿ ಬಂದ ನಾಲ್ಕೈದು ಯುವಕರ ಗುಂಪು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ಮಾಸ್ತಿಗೌಡ ಚನ್ನರಾಯಪಟ್ಟಣ ತಾಲ್ಲೂಕಿನ ಹೊನ್ನಮಾರನಹಳ್ಳಿ ಗ್ರಾಮದ ನಿವಾಸಿಯಾಗಿದ್ದು ಈತ ಹಲವು ಕೃತ್ಯಗಳಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ.
ಘಟನೆ ಬಳಿಕ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಚನ್ನರಾಯಪಟ್ಟಣ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.