ಡೈಲಿ ವಾರ್ತೆ: 4 ಜುಲೈ 2023

ಮೂಡಬಿದಿರೆ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

ಮೂಡಬಿದಿರೆ; ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ.

ಸುಮಂತ್(21) ಆತ್ಮಹತ್ಯೆ ಮಾಡಿಕೊಂಡ ಯುವಕ.ಸುಮಂತ್ ಸೋಮವಾರ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಂದೆಯ ವಿಡಿಯೋವೊಂದು ವೈರಲ್ ಆದ ಹಿನ್ನೆಲೆ ಯುವಕ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಇದೀಗ ವಿಡಿಯೋ ವೈರಲ್‌ ಮಾಡಿದ ಆರೋಪಿಗೆ ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.