ಡೈಲಿ ವಾರ್ತೆ: 5 ಜುಲೈ 2023

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಮೇಲೆ ಹತ್ತಿ ವಿದ್ಯುತ್ ಕಂಬಕ್ಕೆ ಡಿಕ್ಕಿ,

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಮೇಲೆ ಹತ್ತಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಬುಧವಾರ ತುಂಬೆಯಲ್ಲಿ ನಡೆದಿದೆ.

ಬೆಳ್ತಂಗಡಿ ನಿವಾಸಿ ನವಾಜ್ ಎಂಬವರು ಕಾರಿನಲ್ಲಿ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ವೇಳೆ ತುಂಬೆಯಲ್ಲಿ ಈ ಘಟನೆ ನಡೆದಿದ್ದು ಕಾರು ಡಿವೈಡರ್ ಮೇಲೆ ಹತ್ತಿದ್ದಲ್ಲದೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರಿನ ಒಂದು ಭಾಗ ನಜ್ಜುಗುಜ್ಜಾಗಿದೆ. ಆದರೆ ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೊಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ