ಡೈಲಿ ವಾರ್ತೆ:05 ಜುಲೈ 2023

ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣನ ಆರ್ಭಟ:(ಜು. 6) ನಾಳೆಯೂ ಜಿಲ್ಲೆಯ ಶಾಲಾ, ಕಾಲೇಜಿಗೆ ರಜೆ ಘೋಷಣೆ

ಉಡುಪಿ: ಕಳೆದ ಮೂರು ದಿನಗಳಿಂದ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜುಲೈ 6 ರಂದು ಗುರುವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.