ಡೈಲಿ ವಾರ್ತೆ: 6 ಜುಲೈ 2023

ಬಂಟ್ವಾಳ : ಧರೆಗೆ ಗುದ್ದಿ ಪಲ್ಟಿಯಾದ ಕಾರು, ಪುತ್ತೂರು – ಕೂರ್ನಡ್ಕದ ಬಿಬಿಎಂ ವಿದ್ಯಾರ್ಥಿನಿ ಮೃತ್ಯು

ಬಂಟ್ವಾಳ : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಧರೆಗೆ ಗುದ್ದಿ ಪಲ್ಟಿಯಾಗಿ ಯುವತಿಯೋರ್ವಳು ಮೃತಪಟ್ಟ ಘಟನೆ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಗುರುವಾರ ನಡೆದಿದೆ.

ಅಪಘಾತದ ತೀವ್ರತೆ ಗೆ ಕಾರಿನ ಬಾಗಿಲು ಕಿತ್ತುಹೋಗಿ ಕಾರಿನ ಒಳಗಿದ್ದ ಯುವತಿ ಹೊರೆಕ್ಕೆಸೆಯಲ್ಟಿಟ್ಟಿದ್ದು ಗಂಭೀರ ಗಾಯಗೊಂಡ ಈಕೆಯನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತದರೂ ಅದಾಗಲೇ ಆಕೆ ಮೃತಪಟ್ಟಿದ್ದಾರೆ.

ಪುತ್ತೂರು ಕೂರ್ನಡ್ಕ ನಿವಾಸಿ ಅಬ್ದುಲ್ ಮಜೀದ್ ಅವರ ಪುತ್ರಿ, ಮಂಗಳೂರು ಸಂತ ಅಲೋಶಿಯಸ್ ಕಾಲೇಜಿನ ಬಿಬಿಎಂ ವಿದ್ಯಾರ್ಥಿನಿ ಖತೀಜ ಹನಾ (19) ಮೃತಪಟ್ಟ ಯುವತಿ. ಇವರ ಜೊತೆಗಿದ್ದ ಈಕೆಯ ತಾಯಿ ಸಮೀಮ ಮತ್ತು ಚಾಲಕ ಶಾನ್ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಇವರು ಪುತ್ತೂರಿನಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಹೋಗುತ್ತಿದ್ದ ವೇಳೆ ರಾಮಲ್ ಕಟ್ಟೆ ತಲುಪಿದಾಗ ಮಳೆ ಜೋರಾಗಿ ಸುರಿಯುತ್ತಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಗುಡ್ಡಕ್ಕೆ ಗುದ್ದಿ ರಸ್ತೆಗೆ ಪಲ್ಟಿಯಾಗಿದೆ.

ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾಧಿಕಾರಿ ಎಸ್.ಐ.ಸುತೇಶ್ ಮತ್ತು ಸಿಬ್ಬಂದಿ ಗಳು ಬೇಟಿ ನೀಡಿದ್ದಾರೆ.