ಡೈಲಿ ವಾರ್ತೆ:06 ಜುಲೈ 2023
ಉತ್ತರ ಕನ್ನಡ: ಮುಂದುವರಿದ ಮಳೆಯ ಆರ್ಭಟ – (ನಾಳೆಯೂ) ಜು.7 ಶಾಲಾ-ಕಾಲೇಜಿಗೆ ರಜೆ ಘೋಷಣೆ
ಕಾರವಾರ : ಉತ್ತರಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ಮಳೆ ಮುಂದುವರೆದ ಹಿನ್ನಲೆಯಲ್ಲಿ ನಾಳೆ ಜುಲೈ 7 ಶುಕ್ರವಾರ ಕರಾವಳಿ ತಾಲೂಕಿ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
1 ರಿಂದ 12 ತರಗತಿವರೆಗೆ ಎಲ್ಲ ಶಾಲೆ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಹವಮಾನ ಇಲಾಖೆ ನಾಳೆ ಸಹ ಜಿಲ್ಲೆಯಲ್ಲಿ ರೆಡ್ ಅಲರ್ಟ ಘೋಷಣೆ ಮಾಡಿದ್ದು, ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಈ ಹಿನ್ನೆಯಲ್ಲಿ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ತಾಲ್ಲೂಕಿನಲ್ಲಿ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶಿಸಿದೆ.