ಡೈಲಿ ವಾರ್ತೆ: 7 ಜುಲೈ 2023

ನಂದಾವರ : ಗುಡ್ಡ ಜರಿದು ಅವಘಡ, ಮೃತ ಕುಟುಂಬಕ್ಕೆ ಪರಿಹಾರ. ಡಿ.ಸಿ.ಮುಲೈ ಮುಗಿಲನ್ .

ಬಂಟ್ವಾಳ : ಮನೆಗೆ ಗುಡ್ಡ ಜರಿದು ಮಹಿಳೆಯೋರ್ವಳು ಮೃತಪಟ್ಟ ಸಜಿಪ ಮುನ್ನೂರು ಗ್ರಾಮದ ನಂದಾವರದ ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಭೇಟಿ ನೀಡಿದ್ದಾರೆ .

ಅವಘಡ ಸಂಭವಿಸಿದ ಕುಟುಂಬಕ್ಕೆ ರೂ. ಐದು ಲಕ್ಷ ಪರಿಹಾರ ಮತ್ತು ಮನೆ ರಿಪೇರಿಗೆ 1.20 ಲಕ್ಷಪರಿಹಾರವನ್ನು ಸರಕಾರದಿಂದ ನೀಡುವ ಭರವಸೆ ನೀಡಿದರು.

ಜೊತೆಗೆ ತಾಲೂಕಿನಲ್ಲಿ ಮತ್ತೆ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಲು ತಾಲುಕಿನ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಈ ಸಂದರ್ಭದಲ್ಲಿ ತಹಶಿಲ್ದಾರ್ ಎಸ್.ವಿ.ಕೂಡಲಗಿ, ತಾ.ಪಂ. ಕಾರ್ಯ ನಿರ್ವಹಣಾ ಧಿಕಾರಿ ರಾಜಣ್ಣ , ಪಿಡಿಒ ಲಕ್ಷಣ್ ಮತ್ತು ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.