ಡೈಲಿ ವಾರ್ತೆ: 7 ಜುಲೈ 2023
ಮದ್ಯ ಪ್ರಿಯರಿಗೆ ಶಾಕ್:ಬಿಯರ್ ಮೇಲಿನ ಅಬಕಾರಿ ಸುಂಕ ಶೇಕಡ 10ರಷ್ಟು ಹೆಚ್ಚಳ
ಬೆಂಗಳೂರು: ಸಿಎಂ ಸಿದ್ದರಾಮಯ್ಯ 14ನೇ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಹಲವು ಜನಪರ ಕಾರ್ಯಕ್ರಮದ ಜತೆಗೆ ರಾಜ್ಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಬಜೆಟ್ನ್ನು ಮುಖ್ಯಮಂತ್ರಿಗಳು ಮಡಿಸುತ್ತಾರೆಂಬ ನಿರೀಕ್ಷೆಗಳ ಮಧ್ಯೆ ಈ ಬಜೆಟ್ ಮದ್ಯ ಪ್ರಿಯರಿಗೆ ಶಾಕ್ ನೀಡಿದೆ.
ನೂತಕ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ನಲ್ಲಿ ಅಬಕಾರಿ ತೆರಿಗೆ ಹೆಚ್ಚಿಸಿದೆ. ಇದರಿಂದ ಎಣ್ಣೆ ಪ್ರಿಯರ ಜೇಬಿಗೆ ಕತ್ತರಿ ಬೀಳಲಿದೆ. ಅಬಕಾರಿ ತೆರಿಗೆ ಶೇಕಡಾ 20ರಷ್ಟು ಹೆಚ್ಚಳವಾಗಿದೆ. ಬಿಯರ್ ಮೇಲಿನ ಅಬಕಾರಿ ಸುಂಕ ಶೇಕಡಾ 10ರಷ್ಟು ಹೆಚ್ಚಿಸಲಾಗಿದೆ.
ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಘೋಷಿಸಿದ್ದ 5 ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದಿರುವ ಸಿಎಂ ಸಿದ್ದರಾಮಯ್ಯ, ಈ ಯೋಜನೆಗಳಿಗೆ ಹಣ ಹೊಂದಿಸಲು ಭಾರೀ ಕಸರತ್ತು ನಡೆಸುತ್ತಿದ್ದಾರೆ. 2023-24ನೇ ಸಾಲಿನ ಬಜೆಟ್ ಗಾತ್ರ 3.35ಲಕ್ಷ ಕೋಟಿ ರೂಪಾಯಿ ದಾಟುವ ಅಂದಾಜು ಮಾಡಲಾಗಿದೆ. ಸಿದ್ದರಾಮಯ್ಯನವರ ಗ್ಯಾರಂಟಿ ಬಜೆಟ್ನಲ್ಲಿ ಕೆಲವು ಕೊಡುಗೆಗಳನ್ನು ಘೋಷಣೆ ಮಾಡುತ್ತಿದ್ದಾರೆ.