ಡೈಲಿ ವಾರ್ತೆ: 7 ಜುಲೈ 2023
ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು ಅಪ್ಪು ನೆನಪಲ್ಲಿ AED ಸ್ಥಾಪನೆ!
ಬೆಂಗಳೂರು: ಕೆಲ ತಿಂಗಳುಗಳಿಂದ ದೇಶಾದ್ಯಂತ ಹಠಾತ್ ಆಗಿ ಹೃದಯ ಸಂಬಂಧಿ ಸಾವುಗಳು ನಡೆಯುತ್ತಿದ್ದು ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲೂ ವೈರಲ್ ಆಗಿದ್ದವು. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಂತಹ ಸಾವುಗಳು ಆಗದಂತೆ ತಡೆಗಟ್ಟಲು ಕ್ರಮ ಕೈಗೊಳ್ಳಲಾಗಿದ್ದು ಈ ವಿಚಾರ ಬಜೆಟ್ನಲ್ಲೂ ಪ್ರಸ್ತಾಪ ಆಗಿದೆ.
ಕರ್ನಾಟಕ ರತ್ನ ಡಾ| ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು.
ಇದಕ್ಕಾಗಿ ಆರು ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಬಜೆಟ್ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದರು.
ರಾಜ್ಯದಲ್ಲಿ 15 ಸಿ.ಟಿ ಸ್ಕ್ಯಾನಿಂಗ್ ಮತ್ತು ಆರು ಎಂಆರ್ಐ ಸ್ಕ್ಯಾನಿಂಗ್ ಕೇಂದ್ರಗಳನ್ನು ಕೆಲವು ಜಿಲ್ಲಾಸ್ಪತ್ರೆಗಳಲ್ಲಿ ಈಗಾಗಲೇ ಸಾರ್ವಜನಿಕ- ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಿ, ಉಚಿತ ಪ್ರಯೋಗಾಲಯ ಸೇವೆಗಳನ್ನು ನೀಡಲಾಗುತ್ತಿದೆ. ಈ ಸೇವೆಗಳನ್ನು ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಿಗೂ ವಿಸ್ತರಿಸುವ ಬಗ್ಗೆಯೂ ಬಜೆಟ್ನಲ್ಲಿ ಪ್ರಸ್ತಾಪ ನಡೆದಿದೆ.