ಡೈಲಿ ವಾರ್ತೆ: 7 ಜುಲೈ 2023

ಬೆಂಗಳೂರು: ಮೆಟ್ರೊ ಕಾಮಗಾರಿ ವೇಳೆ ಕ್ರೇನ್‌ ಕುಸಿತ, ಅಪಾಯದಿಂದ ಪಾರಾದ ಕಾರ್ಮಿಕರು

ಬೆಂಗಳೂರು: ಮಡಿವಾಳ ಬಳಿ ಮೆಟ್ರೊ ಕಾಮಗಾರಿ ನಿರ್ವಹಿಸುತ್ತಿದ್ದ ಕ್ರೇನ್‌ ಶುಕ್ರವಾರ ರಾತ್ರಿ ಕುಸಿದು ಬಿದ್ದಿದೆ. ಕ್ರೇನ್‌ನಲ್ಲಿದ್ದ ಕಾರ್ಮಿಕರು ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ.

ನಮ್ಮ ಮೆಟ್ರೋ ಕಾಮಗಾರಿ ಸಂದರ್ಭ ಪಿಲ್ಲರ್ಗೆ ಹಾಕುವ ತಂತಿ ಮೇಲೆತ್ತುತ್ತಿರುವಾಗ ಏಕಾಏಕಿ ಕ್ರೇನ್ನ ಹೈಡ್ರಾಲಿಕ್ನಲ್ಲಿ ಸಮಸ್ಯೆ ಉಂಟಾಗಿ ಕ್ರೇನ್ ಹಠಾತ್ ಕುಸಿದಿದೆ. ಆಗ ಕಂಬಿಗಳೆಲ್ಲ ವಾಲಿ ಬಿದ್ದಿವೆ. ಅದೃಷ್ಟವಶಾತ್ ಆ ಸಮಯದಲ್ಲಿ ಕಾರ್ಮಿಕರು ಕಡಿಮೆ ಇದ್ದಿದ್ದರಿಂದ ಸಂಭಾವ್ಯ ಭಾರಿ ಅನಾಹುತ ತಪ್ಪಿದೆ.

ಈ ಪ್ರಕರಣದಿಂದಾಗಿ ಕೆಲ ಹೊತ್ತು ಮಡಿವಾಳ ಜಂಕ್ಷನ್ ಬಳಿ ಆತಂಕದ ಪರಿಸ್ಥಿತಿ ಉಂಟಾಗಿತ್ತು. ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸಂಚಾರ ದಟ್ಟಣೆ, ಜನ ಜಮಾವಣೆಯನ್ನು ಚದುರಿಸಿ ಸೂಕ್ತ ಕ್ರಮಕೈಗೊಂಡರು.