ಡೈಲಿ ವಾರ್ತೆ: 8 ಜುಲೈ 2023
ಬೆಳಣ್:ಮರ ಬಿದ್ದು ಮೃತಪಟ್ಟ ಪ್ರವೀಣ್ ಆಚಾರ್ಯ ಮನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ – 5 ಲಕ್ಷ ರೂ. ಪರಿಹಾರ ವಿತರಣೆ
ಕಾರ್ಕಳ : ಬೆಳಣ್‌ನಲ್ಲಿ ಮರ ಬಿದ್ದು ಮೃತಪಟ್ಟಿದ್ದ ಜಂತ್ರ ಮೂಲದ ಮಂಜುನಾಥ್ ಪ್ರವೀಣ್ ಆಚಾರ್ಯ (31) ಅವರ ಮನೆಗೆ ಜು. 8 ರಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ ನೀಡಿ ಸಾಂತ್ವಾನ ಹೇಳಿದರು. ಬಳಿಕ ಕುಟುಂಬದವರಿಗೆ 5 ಲಕ್ಷ ರೂ. ಪರಿಹಾರದ ಚೆಕ್ ನೀಡಿದರು.
ಉಡುಪಿ ಜಿಲ್ಲೆಗೆ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜಿಲ್ಲೆಯಲ್ಲಿ ಮಳೆಯಿಂದ ಸಾವನಪ್ಪಿದವರ ಕುಟುಂಬದ ಮಾಹಿತಿ ಪಡೆದು ಕೆಲವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿ ಅವರಿಗೆ ಪರಿಹಾರ ನೀಡಿದ್ದಾರೆ.
ಈ ಸಂದರ್ಭ ಜಿಲ್ಲಾಧಿಕಾರಿ ಕೂರ್ಮ ರಾವ್, ಎಸ್‌ಪಿ ಅಕ್ಷಯ್ ಮಚ್ಛೇಂದ್ರ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿ ಮತ್ತಿತರಿದ್ದರು.