ಡೈಲಿ ವಾರ್ತೆ:11 ಜುಲೈ 2023

ಖಾಸಗಿ ಅಂಗವನ್ನೇ ಕತ್ತರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವೈದ್ಯಕೀಯ ವಿದ್ಯಾರ್ಥಿ

ಹೈದರಾಬಾದ್: ಖಿನ್ನತೆಯಿಂದ ಬಳಲುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ತನ್ನ ಖಾಸಗಿ ಅಂಗವನ್ನೇ ಕತ್ತರಿಸಿಕೊಂಡು ತನ್ನ ಜೀವನವನ್ನೇ ಅಂತ್ಯಗೊಳಿಸಿರುವ ಆಘಾತಕಾರಿ ಘಟನೆ ತೆಲಂಗಾಣದ ಸಿಕಂದರಾಬಾದ್‌ನಲ್ಲಿ ನಡೆದಿದೆ.


ಮೃತ ವೈದ್ಯಕೀಯ ವಿದ್ಯಾರ್ಥಿಯನ್ನು ದೀಕ್ಷಿತ್ ರೆಡ್ಡಿ (21) ಎಂದು ಗುರುತಿಸಲಾಗಿದೆ. ಆತ ಕಳೆದ 4 ವರ್ಷಗಳಿಂದ ಖಿನ್ನತೆಯಿಂದ ಬಳಲುತ್ತಿದ್ದು, ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಭಾನುವಾರ ಲೇಸರ್ ಬ್ಲೇಡ್ ಬಳಸಿ ತನ್ನ ಖಾಸಗಿ ಅಂಗವನ್ನೇ ಕತ್ತರಿಸಿಕೊಳ್ಳುವ ಮೂಲಕ ಆತ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.