ಡೈಲಿ ವಾರ್ತೆ: 13 ಜುಲೈ 2023

ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ವರ್ಗಾವಣೆ, ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ ನೇಮಕ

ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ. ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಇದ್ದ ಜಿಲ್ಲಾಧಿಕಾರಿ ಕೂರ್ಮ ರಾವ್ ಎಂ. ಅವರು ವರ್ಗಾವಣೆಗೊಂಡಿದ್ದಾರೆ.

ತುಮಕೂರಿನಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ವಿದ್ಯಾಕುಮಾರಿ.ಕೆ ಅವರು ಈ ಹಿಂದೆ ಉಡುಪಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ರಾಜ್ಯ ಸರಕಾರದ ಆದೇಶದ ಮೇರೆಗೆ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

ಜಿಲ್ಲಾಧಿಕಾರಿ ಕೂರ್ಮ ರಾವ್ ಅವರು ಸೆಪ್ಟೆಂಬರ್ 2021 ರಲ್ಲಿ ಉಡುಪಿ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು ಇಂದು ವರ್ಗಾವಣೆ ಗೊಂಡಿದ್ದಾರೆ.