ಡೈಲಿ ವಾರ್ತೆ: 14 ಜುಲೈ 2023

ಬೆಂಗಳೂರಲ್ಲಿ ಹಿಟ್ & ರನ್: ಸ್ಥಳದಲ್ಲೇ ಇಬ್ಬರು ಸಾವು

ಬೆಂಗಳೂರು: ಲಾರಿಯೊಂದು ಬೈಕ್‍ಗೆ ಡಿಕ್ಕಿಯಾದ ಪರಿಣಾಮ ಸವಾರರಿಬ್ಬರು ಸಾವಿಗೀಡಾದ ಘಟನೆ ಅತ್ತಿಬೆಲೆಯ ಸಮೀಪದ ಗೆಸ್ಟ್ ಲೈನ್ ಗೇಟ್ ಬಳಿ ನಡೆದಿದೆ.

ಓರ್ವ ಮೃತನನ್ನು ಮಂಗಮ್ಮನ ಪಾಳ್ಯ ವಾಸಿ ಮಂಜಪ್ಪ (32) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಬೈಕ್ ಸವಾರನ ಗುರುತು ಪತ್ತೆಯಾಗಿಲ್ಲ. ಲಾರಿ ಹಿಂಬದಿಯಿಂದ ಬೈಕ್‍ಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಅಪಘಾತದ ಬಳಿಕ ಲಾರಿಯನ್ನು ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ.
ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಹತ್ತಿರದ ಖಾಸಗಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ.