ಡೈಲಿ ವಾರ್ತೆ: 15 ಜುಲೈ 2023

ಪುದುಮಾಪ್ಳ ಶಾಲಾ ಮುಖ್ಯ ಶಿಕ್ಷಕಿ ಶಕುಂತಲಾ ಎಸ್.ಉಳ್ಳಾಲ್ ಅವರಿಗೆ ಬೀಳ್ಕೊಡುಗೆ.

ಬಂಟ್ವಾಳ : ಫರಂಗಿಪೇಟೆ ಪುದುಮಾಪ್ಳ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ 9 ವರ್ಷಗಳಿಂದ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿ ಇದೀಗ ವರ್ಗಾವಣೆಗೊಂಡ ಶಕುಂತಲಾ ಎಸ್.ಉಳ್ಳಾಲ್ ಅವರಿಗೆ ಫರಂಗಿಪೇಟೆ ಟುಡೇ ಫೌಂಡೇಶನ್, ಶಾಲಾಭಿವೃದ್ಧಿ ಸಮಿತಿ, ಶಿಕ್ಷಕ ವೃಂದದ ವತಿಯಿಂದ ಬೀಳ್ಕೊಡುಗೆ ಸಮಾರಂಭ ಶನಿವಾರ ಶಾಲಾ ಸಭಾಂಗಣದಲ್ಲಿ ನಡೆಯಿತು.

ಪುದು ಗ್ರಾಮ ಪಂಚಾಯತ್ ಅಧ್ಯಕ್ಷೆ ರಶೀದಾ ಭಾನು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ದ.ಕ.ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ, ಟುಡೇ ಫೌಂಡೇಶನ್ ಅಧ್ಯಕ್ಷ ಉಮ್ಮರ್ ಫಾರೂಕ್ ಪ್ರಾಸ್ತಾವಿಕವಾಗಿ ಮಾತನಾಡಿ 120 ವರ್ಷಗಳ ಇತಿಹಾಸ ಹೊಂದಿರುವ ಈ ಪುದುಮಾಪ್ಳ ಸರ್ಕಾರಿ ಶಾಲೆಯ ಉಳಿವು ಹಾಗೂ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮುಖ್ಯ ಶಿಕ್ಷಕಿ ಶಕುಂತಲಾ ಎಸ್.ಉಳ್ಳಾಲ್ ಅವರ ಸೇವೆ ಸದಾ ಸ್ಮರಣೀಯ ಎಂದರು.

ಸನ್ಮಾನ ಸ್ವೀಕರಿಸಿದ ಶಕುಂತಲಾ ಎಸ್.ಉಳ್ಳಾಲ್ ಅವರು ಮಾತನಾಡಿ ಕಳೆದ 9 ವರ್ಷಗಳಿಂದ ಶಾಲೆಯ ಅವಶ್ಯಕತೆಗೆ ತಕ್ಕಂತೆ ಅನುದಾನವನ್ನು ನೀಡಿದ ಕ್ಷೇತ್ರದ ಶಾಸಕರಾದ ಯು.ಟಿ.ಖಾದರ್, ಸಹಕರಿಸಿದ ಪುದು ಗ್ರಾಮ ಪಂಚಾಯತ್, ನನಗೆ ಬೆನ್ನೆಲುಬಾಗಿ ನಿಂತು ಶಾಲೆಯ ಎಲ್ಲಾ ಕಾರ್ಯಗಳನ್ನು ಸುಸೂತ್ರವಾಗಿ ಮಾಡಲು ಸಹಕರಿಸಿದ ಟುಡೇ ಫೌಂಡೇಶನ್, ಶಾಲಾಭಿವೃದ್ಧಿ ಸಮಿತಿ, ಶಿಕ್ಷಕ ವೃಂದ ಹಾಗೂ ಪೋಷಕರಿಗೆ ಕೃತಜ್ಞತೆ ಸಲ್ಲಿಸಿದರು.

ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ರಮ್ಲಾನ್, ಪುದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಇಕ್ಬಾಲ್ ಸುಜೀರ್, ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ರಮ್ಲಾನ್ ಮಾರಿಪಳ್ಳ, ಸದಸ್ಯರುಗಳಾದ ಮುಹಮ್ಮದ್ ಮೋನು, ಸಾರಮ್ಮ, ಟುಡೇ ಫೌಂಡೇಶನ್ ಪ್ರಮುಖರಾದ ಅಬೂಬಕ್ಕರ್ ಫರಂಗಿಪೇಟೆ, ಮಜೀದ್ ಫರಂಗಿಪೇಟೆ, ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಪಿ.ಎಸ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಹ ಶಿಕ್ಷಕಿಯರಾದ ಸುನಿತಾ ಲವೀನಾ ಡೇಸಾ ಸ್ವಾಗತಿಸಿ, ಅರ್ಪಿತಾ ವಂದಿಸಿದರು. ಶಾಲೆಟ್ ಕ್ರಾಸ್ಟಾ ಕಾರ್ಯಕ್ರಮ ನಿರೂಪಿಸಿದರು.