ಡೈಲಿ ವಾರ್ತೆ:17 ಜುಲೈ 2023

ಪರೀಕ್ಷೆ ದಿನವೇ 8ನೇ ಮಹಡಿಯಿಂದ ಹಾರಿ ಪ್ರಾಣ ಕಳ್ಕೊಂಡ ವಿದ್ಯಾರ್ಥಿ.!

ಬೆಂಗಳೂರು: ವಿದ್ಯಾರ್ಥಿಯೊಬ್ಬ ತನ್ನ ಪರೀಕ್ಷೆ ದಿನವೇ ಎಂಟನೇ ಮಹಡಿಯಿಂದ ಹಾರಿ ಪ್ರಾಣ ಕಳೆದುಕೊಂಡ ಪ್ರಕರಣ ನಡೆದಿದೆ. ಕೆಲವು ತಿಂಗಳ ಹಿಂದೆ ವಿದ್ಯಾರ್ಥಿಯೊಬ್ಬ ತಪ್ಪನ್ನು ಮಾಡಿ, ಆತ್ಮಹತ್ಯೆ ಮಾಡಿಕೊಂಡಿದ್ದ ಮಾದರಿಯಲ್ಲೇ ಈ ವಿದ್ಯಾರ್ಥಿಯ ಪ್ರಕರಣ ನಡೆದಿದೆ ಎನ್ನಲಾಗಿದೆ.

ಮೂಲತಃ ಮಂಗಳೂರಿನ ಆದಿತ್ಯ ಪ್ರಭು (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಬೆಂಗಳೂರಿನ ಪಿಇಎಸ್ ಕಾಲೇಜಿನಲ್ಲಿ ಬಿಟೆಕ್ ಸೆಕೆಂಡ್ ಸೆಮಿಸ್ಟರ್ನಲ್ಲಿ ವ್ಯಾಸಂಗ ಮಾಡುತ್ತಿದ್ದ. ಇಂದು ಪರೀಕ್ಷೆ ಕೂಡ ನಡೆಯುತ್ತಿತ್ತು.
ಇವತ್ತು ಪರೀಕ್ಷೆ ಸಂದರ್ಭದಲ್ಲಿ ಈತ ಕಾಪಿ ಮಾಡಿದ್ದು, ಆ ವಿಷಯ ಗೊತ್ತಾಗಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಂಬ ಆರೋಪವೂ ಇದೆ. ಆ ಕಾರಣಕ್ಕೆ ಈತ ಎಂಟನೇ ಮಹಡಿಯಿಂದ ಹಾರಿಕೊಂಡಿದ್ದಾನೆ ಎನ್ನಲಾಗಿದೆ ಎಂದು ದಕ್ಷಿಣವಲಯದ ಡಿಸಿಪಿ ಕೃಷ್ಣಕಾಂತ್ ಹೇಳಿದ್ದಾರೆ.
ಕಳೆದ ವರ್ಷದ ನವೆಂಬರ್ನಲ್ಲಿ ಬೆಂಗಳೂರಿನ ಖಾಸಗಿ ಶಾಲೆಯೊಂದರ ಮೊಹಿನ್ ಎಂಬ ವಿದ್ಯಾರ್ಥಿಯೊಬ್ಬ ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿಬಿದ್ದಿದ್ದು, ಶಿಕ್ಷಕರು ಆ ತಪ್ಪಿಗಾಗಿ ಹೊರಗೆ ನಿಲ್ಲಿಸಿದ್ದರು ಎಂದು ಮನನೊಂದು, ಹತ್ತನೇ ಮಹಡಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದ.