



ಡೈಲಿ ವಾರ್ತೆ:18 ಜುಲೈ 2023


ಕುಂದಾಪುರ:ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟದ ಪೂರ್ವಬಾವಿ ಸಭೆ
ಕುಂದಾಪುರ: ಯಾವುದೇ ಕೆಲಸ ಮಾಡುವಾಗ ಒಗ್ಗಟ್ಟಿನಿಂದ ಮಾಡಬೇಕು.ಆಗ ಅದು ಯಶಸ್ವಿಯಾಗಿ ಸಂಪನ್ನಗೊಳ್ಳತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶ ಗಣಪತಿ ಕೆ. ಹೇಳಿದರು. ಅವರು ಸೋಮವಾರ ಕುಂದಾಪುರ
ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದ ಆಶ್ರಯ ದಲ್ಲಿ ಕುಂದಾಪುರದ ಕಲಾಮಂದಿರದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಡದ ಪೂರ್ವಬಾವಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿಎಂಸಿ ಅಧ್ಯಕ್ಷ ಸತೀಶ್ ಕುಮಾರ್ ವಹಿಸಿದ್ದರು. ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಗೋಪಾಲ ಶೆಟ್ಟಿ ಜಿಲ್ಲಾ ಮಟ್ಟದ ಪಂದ್ಯಾಟ ಮತ್ತು ಕ್ರೀಡಾಕೂಟ ಹಾಗೂ ಉಪನಿರ್ದೇಶಕರ ಕಚೇರಿಯ ಶಿಕ್ಷಣಾಧಿಕಾರಿ ಜಾಹ್ನವಿ ಪ್ರತಿಭಾ ಕಾರಂಜಿಯ ಬಗ್ಗೆ ಮಾಹಿತಿ ನೀಡಿದರು.
ವಿವಿಧವವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶೋಭಾ ಶೆಟ್ಟಿ , ಚಂದ್ರಶೇಖರ, ಮಂಜುನಾಥಯ್ಯ, ನಿರ್ಮಲ, ರಂಗನಾಥ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ಚಂದ್ರಶೇಖರ್ ಶೆಟ್ಟಿ, ರವೀಂದ್ರ ನಾಯಕ್, ಪದ್ಮಾವತಿ, ರವಿಚಂದ್ರ ಕಾರಂತ್, ಯುವಜನ ಕ್ರೀಡಾಧಿಕಾರಿ ಕುಸುಮಾಕರ್ ಶೆಟ್ಟಿ, ಜಿಲ್ಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಸಂಜೀವ ದೇವಾಡಿಗ, ಪದವಿ ಪೂರ್ವ ಕಾಲೇಜುಗಳ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಜೀವನ್ ಶೆಟ್ಟಿ, ಗ್ರೇಡ್ 1 ದೈಹಿಕ ಶಿಕ್ಷಣ ಶಿಕ್ಷಣರ ಸಂಘದ ಅಧ್ಯಕ್ಷ ಸತ್ಯನಾರಾಯಣ, ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗಣೇಶ್ ಶೆಟ್ಟಿ ಮೊಳಹಳ್ಳಿ ಉಪಸ್ಥಿತರಿದ್ದರು.
ಬೋರ್ಡ್ ಹೈಸ್ಕೂಲಿನ ಉಪಪ್ರಾಂಶುಪಾಲ ಕಿರಣ್ ಹೆಗ್ಡೆ ಸ್ವಾಗತಿಸಿದರು, ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು. ಕುಂದಾಪುರ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ವಂದಿಸಿದರು.