ಡೈಲಿ ವಾರ್ತೆ: 19 ಜುಲೈ 2023
ಡೆಪ್ಯುಟಿ ಸ್ಪೀಕರ್ ಮೇಲೆ ಕಾಗದ ಪತ್ರ ಎಸೆತ: ಅಸಭ್ಯ ತೋರಿದ 10 ಬಿಜೆಪಿ ಶಾಸಕರು ವಿಧಾನಸಬೆಯಿಂದ ಅಮಾನತು!
ಬೆಂಗಳೂರು: ಆಡಳಿತ ಮತ್ತು ವಿರೋಧ ಪಕ್ಷದ ನಾಯಕರ ಮಾತಿನ ಚಕಮಕಿ ನಡೆದು ಸದನದಲ್ಲಿ ಬಜೆಪಿ ಶಾಸಕರು ವಿಧಾನಸಭೆ ಉಪಾಧ್ಯಕ್ಷರ ಮೇಲೆ ಕಾಗದ ಚೂರುಗಳನ್ನು ಎಸೆದು ತೂರಿದ ಘಟನೆಗೆ ಸಂಬಂಧಿಸಿ 10 ಮಂದಿ ಬಿಜೆಪಿ ಶಾಸಕರನ್ನು ವಿಧಾನಸಭೆಯಿಂದ ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಲಾಗಿದೆ.
ಅಶ್ವತ್ಥ ನಾರಾಯಣ, ಆರ್.ಅಶೋಕ್, ವೇದವ್ಯಾಸ ಕಾಮತ್, ಸುನೀಲ್ ಕುಮಾರ್, ಅರವಿಂದ ಬೆಲ್ಲದ್, ಯಶ್‌ಪಾಲ್ ಸುವರ್ಣ, ಧೀರಜ್ ಮುನಿರಾಜ್, ಉಮಾನಾಥ್ ಕೋಟ್ಯಾನ್ ಅವರನ್ನು ಹೆಸರನ್ನು ಉಲ್ಲೇಖಿಸಿದ ಸ್ಪೀಕರ್ ಯು.ಟಿ ಖಾದರ್ ಅಮಾನತು ಮಾಡಿ ಆದೇಶ ಹೊರಡಿಸಿದರು.
ಬಿಜೆಪಿ ಸದಸ್ಯರಿಂದ ಡೆಪ್ಯುಟಿ ಸ್ಪೀಕರ್ ಮೇಲೆ ಕಾಗದ ಪತ್ರ ಎಸೆಯಲಾಗಿದ್ದು, ಈ ಬಗ್ಗೆ ಸ್ಪೀಕರ್ಗೆ ಬಿಜೆಪಿ ಶಾಸಕರ ವಿರುದ್ಧ ಕಾಂಗ್ರೆಸ್ ಸದಸ್ಯರು ದೂರು ನೀಡಿದ್ದರು.