ಡೈಲಿ ವಾರ್ತೆ:21 ಜುಲೈ 2023

ಮಣಿಪುರದಲ್ಲಿ ಕಂಪಿಸಿದ ಭೂಮಿ; ಜೈಪುರದಲ್ಲೂ ಭೂ ಕಂಪನ!

ಇಂಫಾಲ: ಶುಕ್ರವಾರ ಮುಂಜಾನೆ ಸುಮಾರು 5:01ಕ್ಕೆ ಮಣಿಪುರದ ಉಖ್ರುಲ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ. ಭೂಕಂಪವು 20 ಕಿಲೋಮೀಟರ್ ಆಳದಲ್ಲಿ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಂಪನದ ಅನುಭವವಾಗುತ್ತಿದ್ದಂತೆ ಜನ ಭಯಭೀತರಾಗಿ ಮನೆಯಿಂದ ಹೊರಬಂದಿದ್ದಾರೆ ಎನ್ನಲಾಗಿದೆ, ಭೂಕಂಪನದಿಂದ ಯಾವುದೇ ಜೀವಹಾನಿ ಅಥವಾ ಆಸ್ತಿಪಾಸ್ತಿ ಹಾನಿಯಾದ ಬಗ್ಗೆ ವರದಿಯಾಗಿಲ್ಲ.

ರಾಜಸ್ಥಾನದ ಜೈಪುರದಲ್ಲೂ ಭೂ ಕಂಪನ:
ಶುಕ್ರವಾರ ಮುಂಜಾನೆ ರಾಜಸ್ಥಾನದ ಜೈಪುರದ ಮೂರು ಭಾಗಗಳಲ್ಲಿ ಭೂಕಂಪಗಳು ಸಂಭವಿಸಿವೆ ಎಂದು ವರದಿಯಾಗಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಮೂರು ಕಂಪನಗಳು ಕೇವಲ 30 ನಿಮಿಷಗಳ ಅವಧಿಯಲ್ಲಿ ಸಂಭವಿಸಿದೆ ಎಂದು ಹೇಳಿದ್ದಾರೆ.

ಶುಕ್ರವಾರ ನಸುಕಿನ ಜಾವ 4 ಗಂಟೆಯಿಂದ 4:30 ನಿಮಿಷಗಳ ಅವಧಿಯಲ್ಲಿ ಮೂರು ಕಂಪನಗಳು ಸಂಭವಿಸಿದೆ ಎಂದು ಹೇಳಲಾಗಿದೆ. ಅದರಲ್ಲಿ 4:09ರ ಸುಮಾರಿಗೆ 4.4ರ ತೀವ್ರತೆ ಹೊಂದಿದ್ದರೆ, 4:22ರ ಸುಮಾರಿಗೆ 3.1 ರ ತೀವ್ರತೆ ಹಾಗೂ 4:25 ರ ಸುಮಾರಿಗೆ 3.4ರ ತೀವ್ರತೆಯ ಭೂಕಂಪನದ ಅನುಭವಾಗಿದೆ ಎಂದು ಹೇಳಲಾಗಿದೆ.