ಡೈಲಿ ವಾರ್ತೆ: 21 ಜುಲೈ 2023

ಹಾಸನ:ಕಾರು ಹಾಗೂ ಟಿಪ್ಪರ್ ಮುಖಾಮುಖಿ ಡಿಕ್ಕಿ: ನಾಲ್ವರು ಮೃತ್ಯು

ಹಾಸನ: ಟಿಪ್ಪರ್ ಲಾರಿ ಹಾಗೂ ಇನೋವಾ ಕಾರು ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಮೃತಪಟ್ಟರಿರುವ ಘಟನೆ ಆಲೂರು ತಾಲ್ಲೂಕಿನ ಈಶ್ವರಹಳ್ಳಿ ಕೂಡಿಯಲ್ಲಿ ಶುಕ್ರವಾರ ಸಂಜೆ ಸಂಭವಿಸಿದೆ.

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಪಾಳ್ಯ ಸಮೀಪ ಈಶ್ವರಹಳ್ಳಿ ಕೂಡಿಗೆಯಲ್ಲಿ ಅಪಘಾತ ಸಂಭವಿಸಿದೆ. ಸಕಲೇಶಪುರ ಕಡೆಗೆ ಹೋಗುತ್ತಿದ್ದ ಇನೋವಾ ಕಾರಿಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಗುತ್ತಿಗೆದಾರರಿಗೆ ಸೇರಿದ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ಕು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಹಾಸನ ತಾಲೂಕಿನ ಕುಪ್ಪಳಿ ಗ್ರಾಮದ ಚೇತನ್, ಗುಡ್ಡೇನಹಳ್ಳಿ ಗ್ರಾಮದ ಅಶೋಕ್, ತಟ್ಟೆಕೆರೆ ಪುರುಷೋತ್ತಮ ಹಾಗೂ ಆಲೂರು ತಾಲ್ಲೂಕಿನ ಚಿಗಳೂರು ಗ್ರಾಮದ ದಿನೇಶ್ ಎಂದು ತಿಳಿದು ಬಂದಿದೆ

ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಕಾಮಗಾರಿ ಮಂದಗತಿ ಸಾಗುತ್ತಿದ್ದು ಏಳೆಂಟು ವರ್ಷಗಳಿಂದ ನೂರಾರು ಅಮಾಯಕ ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ ಅದರೂ ಎಚ್ಚೆತ್ತುಕೊಳ್ಳದ ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಕಾಮಗಾರಿ ನಡೆಯುವ ಸ್ಥಳದಲ್ಲಿ ಯಾವುದೇ ಸೂಚನಾ ಫಲಕಗಳನ್ನು ಅಳವಡಿಸದೇ ಇರುವುದು ಅಪಘಾತಕ್ಕೆ ಕಾರಣವಾಗಿದೆ.