ಡೈಲಿ ವಾರ್ತೆ:22 ಜುಲೈ 2023

ಮಣಿಪಾಲ:ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿ

ಮಣಿಪಾಲ: ಉಡುಪಿ ಜಿಲ್ಲೆಯ ಮಣಿಪಾಲದ ಲಕ್ಷ್ಮೀಂದ್ರನಗರದ ಬಳಿ ಕಾರೊಂದು ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ.

ಬೆಳಿಗ್ಗೆಯಿಂದ ಮಳೆ ಸುರಿಯುತ್ತಿದ್ದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವ್ಯೆಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಇನ್ನು ಅಪಘಾತದ ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಢಿಕ್ಕಿಯ ರಭಸಕ್ಕೆ ಕಾರಿನ ಬೊನೆಟ್ ಹಾಗೂ ಬಂಪರ್ ಕಿತ್ತು ಹೋಗಿದೆ.
ಮಣಿಪಾಲ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.