ಡೈಲಿ ವಾರ್ತೆ:23 ಜುಲೈ 2023

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ: ನಾಳೆ (ಜು. 24) ರಂದು ಶಾಲಾ – ಕಾಲೇಜಿಗೆ ರಜೆ ಘೋಷಣೆ

ಕಾರವಾರ : ಉತ್ತರಕನ್ನಡ ಜಿಲ್ಲೆಯಲ್ಲಿ ಧಾರಾಕಾರವಾಗಿ ಗಾಳಿ ಸಹಿತ ಮಳೆ ಸುರಿಯುತ್ತಿದ್ದ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಕ್ಕಳ ಹಿತದೃಷ್ಟಿಯಿಂದ ಆಯಾ ತಾಲೂಕಿನ ತಹಸೀಲ್ದಾರರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಚರ್ಚಿಸಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟ, ಹೊನ್ನಾವರ, ಭಟ್ಕಳ, ಯಲ್ಲಾಪುರ, ಸೇರಿ ಜಿಲ್ಲಾದ್ಯಂತ ಅಂಗನವಾಡಿಯಿಂದ ದ್ವೀತಿಯ ಪಿಯುಸಿಯವರಗೆ ರಜೆ ಘೋಷಣೆ ಮಾಡಲಾಗಿದೆ. ಸರಕಾರ ಹಾಗೂ ಖಾಸಗಿ ಶಾಲೆಗೆ ರಜೆ ಘೋಷಿಸಲಾಗಿದೆ.