ಡೈಲಿ ವಾರ್ತೆ: 23 ಜುಲೈ 2023

ಉಡುಪಿ ಜಿಲ್ಲೆ ಭಾರೀ ಗಾಳಿ ಮಳೆಯಿಂದಾಗಿ ಜಿಲ್ಲೆಯ ಎಲ್ಲಾ ಶಾಲೆ ಮತ್ತು ಕಾಲೇಜುಗಳಿಗೆ ನಾಳೆ (ಸೋಮವಾರ)ರಜೆ ಘೋಷಣೆ: ಉಡುಪಿ ಜಿಲ್ಲಾಧಿಕಾರಿ

ಉಡುಪಿ: ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ನದಿ ಹಳ್ಳ ಕೊಳ್ಳಗಳಲ್ಲಿ ಹೆಚ್ಚಿನ ನೀರು ಹರಿವು ಹಾಗೂ ಹೆಚ್ಚು ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆಯ ವರದಿ ಇರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಆದೇಶಿಸಿದ್ದಾರೆ.