ಡೈಲಿ ವಾರ್ತೆ: 25 ಜುಲೈ 2023

ನೇರಳಕಟ್ಟೆ: ಕಾರು ಹಾಗೂ ಟಿಪ್ಪರ್ ನಡುವೆ ಭೀಕರ ಅಪಘಾತ – ನಾಲ್ವರು ಗಂಭೀರ!

ನೇರಳಕಟ್ಟೆ: ಮಾಣಿ ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ ಪರ್ಲೋಟ್ಟು ಎಂಬಲ್ಲಿ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.

ಮುಂಬೈ ಮೂಲದ ಪ್ರಯಾಣಿಕರು ಮಂಗಳೂರುನಿಂದ ಮೈಸೂರಿಗೆ ತೆರಳುತ್ತಿದ್ದಾಗ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸಹಿತ ನಾಲ್ವರು ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.

ಪೊಲೀಸರು ಸ್ಥಳಕ್ಕಾಗಮಿಸಿ ರಸ್ತೆಯಿಂದ ವಾಹನ ತೆರವುಗೊಳಿಸಿ ಸಂಚಾರ ಮುಕ್ತ ಗೊಳಿಸಿದ್ದಾರೆ.