ಡೈಲಿ ವಾರ್ತೆ: 25 ಜುಲೈ 2023

ಉಡುಪಿ: ಪ್ಯಾರಾಮೆಡಿಕಲ್ ಕಾಲೇಜು ಟಾಯ್ಲೆಟ್ ನಲ್ಲಿ ಹಿಡನ್ ಕ್ಯಾಮೆರಾ – ಉಡುಪಿ ಎಸ್ಪಿ ಸ್ಪಷ್ಟನೆ!

ಉಡುಪಿ: ಉಡುಪಿಯ ಪ್ಯಾರಾಮೆಡಿಕಲ್ ಕಾಲೇಜು ಟಾಯ್ಲೆಟ್ ನಲ್ಲಿ ಮೊಬೈಲ್ ಇರಿಸಿ ಚಿತ್ರೀಕರಣ ಮಾಡಿದ ವಿಚಾರ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಸಂಚಲನ ಮೂಡಿಸಿದೆ. ಈ ಬಗ್ಗೆ ಯಾವುದೇ ದೂರು ದಾಖಲಾಗದಿದ್ದರೂ ಸೋಶಿಯಲ್ ಮೀಡಿಯಾಗಳಲ್ಲಿ ವದಂತಿಗಳನ್ನು ಹಬ್ಬಿಸಲಾಗುತ್ತಿದೆ.

ಈ ವಿಚಾರವಾಗಿ ಇವತ್ತು ಸ್ಪಷ್ಟಿಕರಣ ನೀಡಿರುವ ಉಡುಪಿ ಎಸ್ಪಿ ಅಕ್ಷಯ್ ಮಚ್ಚೀಂದ್ರ ಕಳೆದ ವಾರ ಉಡುಪಿಯ ಪ್ಯಾರಾ ಮೆಡಿಕಲ್ ಕಾಲೇಜಿನಲ್ಲಿ ನಡೆದ ವಿಚಾರ ಮಾಧ್ಯಮ, ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗುತ್ತಿದೆ. ಈ ವಿಚಾರದ ಜೊತೆ ಬೇರೆ ಬೇರೆ ಉದ್ದೇಶದಿಂದ ಮಾಹಿತಿಗಳು ಶೇರ್ ಆಗುತ್ತಿವೆ. ಆದರೆ ಹಿಡನ್ ಕ್ಯಾಮೆರಾ ಮೂಲಕ ಚಿತ್ರೀಕರಿಸಿದ ಬಗ್ಗೆ ನಮ್ಮ ಗಮನಕ್ಕೆ ಬಂದಿಲ್ಲ. ಬ್ಲ್ಯಾಕ್ ಮೇಲ್ ಬಗ್ಗೆ, ವೀಡಿಯೋ ಹರಿದಾಡಿದ ಬಗ್ಗೆ ನಾವು ಗಮನ ಇಟ್ಟಿದ್ದೇವೆ.
ಬೇರೆ ಕಡೆಯ ವಿಡಿಯೋ ಶೇರ್ ಆಗುತ್ತಿದೆ, ವಾಯ್ಸ್ ಎಡಿಟ್ ಮಾಡಲಾಗಿದೆ. ಸತ್ಯಾಸತ್ಯತೆ ಗೊತ್ತಿಲ್ಲದೆ ಶೇರ್ ಮಾಡಿದರೆ ತಪ್ಪಾಗುತ್ತದೆ. ವೈರಲ್ ಆಗಿರುವ ಬಗ್ಗೆ ಫೇಸ್ ಬುಕ್, ವಾಟ್ಸಪ್ ಮೇಲೆ ನಿಗಾ ಇರಿಸಲಾಗಿದೆ.
ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.
ದೂರು ದಾಖಲಾದರೆ ಕ್ರಮ ಕೈಗೊಳ್ಳುತ್ತೇವೆ. ಯಾರೂ ಕೂಡ ಈ ಬಗ್ಗೆ ವದಂತಿ ಹಬ್ಬಿಸಬಾರದು ಎಂದು ಹೇಳಿದ್ದಾರೆ.